HomeKarnatakaಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಜಿ.ಪರಮೇಶ್ವರ್ ಮೊದಲ ಪ್ರತಿಕ್ರಿಯೆ

ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಜಿ.ಪರಮೇಶ್ವರ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಡಾ. ಜಿ.ಪರಮೇಶ್ವರ್ ಆಯ್ಕೆಯಾಗಿದ್ದು, ಇಂದು ಲೋಕಭವನದಲ್ಲಿ ನೂತನ ಸಿಎಂ ಡಿ.ಕೆ.ಶಿವಕುಮಾರ್ ಜೊತೆಯೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಡಿಸಿಎಂ ಆಗಿ ಆಯ್ಕೆಯಾದ ಬೆನ್ನಲ್ಲೇ ಪರಮೇಶ್ವರ್ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ತಮ್ಮನ್ನು ಈ ಮಹತ್ವದ ಹುದ್ದೆಗೆ ಆಯ್ಕೆ ಮಾಡಿದ ಪಕ್ಷದ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಅವರಿಗೆ ವಿಶೇಷ ಧನ್ಯವಾದಗಳನ್ನು ಹೇಳುತ್ತೇನೆ. ನನ್ನ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆಗೆ ನಾನು ಆಭಾರಿಯಾಗಿರುವುದಾಗಿ ಹಾಗೂ ಈ ಸರ್ಕಾರ ಉತ್ತಮ ಆಡಳಿತ ನೀಡುವುದಾಗಿ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪಮುಖ್ಯಮಂತ್ರಿಯಾಗುವುದು ಇದೊಂದು ಸುವರ್ಣಾವಕಾಶ. ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular