HomeLatest NewsBIG NEWS: ಹೆಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರ: ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್

BIG NEWS: ಹೆಚ್.ಡಿ.ಕುಮಾರಸ್ವಾಮಿ ಭೇಟಿ ವಿಚಾರ: ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಸಾಕಷ್ಟು ಕುತೂಹಲವನ್ನೂ ಮೂಡಿಸಿತ್ತು. ಇದೀಗ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಾನು ರಾಜಕೀಯ ಕಾರಣಕ್ಕೆ ಕುಮಾರಸ್ವಾಮಿ ಅವರನ್ನು ಭೇಟಿಯಾಗಿಲ್ಲ. ಕೈಗಾರಿಕಾ ವಿಚಾರವಾಗಿ ಚರ್ಚಿಸಲು ಭೇಟಿ ಮಾಡಿದ್ದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ನಾವು ಒಟ್ಟಾಗಿ ಸರ್ಕಾರ ನಡೆಸಿದವರು. ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೇ ತಪ್ಪು ಅನ್ನೋದು ಸರಿಯಲ್ಲ. ನಮ್ಮ ಸಿದ್ಧಾಂತ ನಮಗೆ, ಅವರ ಸಿದ್ಧಾಂತ ಅವರಿಗೆ. ರಾಜಕೀಯ ವಿಚಾರವಾಗಿ ನಾವು ಭೇಟಿಯಾಗಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular