HomeKarnatakaಎರಡನೇ ವಿಮಾನ ನಿಲ್ದಾಣ ವಿಚಾರ: ತುಮಕೂರಿನಲ್ಲಿ ನಿರ್ಮಾಣವಾಗಬೇಕು ಎಂದು ನಾನು ಮೊದಲಿನಿಂದ ಹೇಳಿದ್ದೇನೆ ಎಂದ ಡಿಸಿಎಂ...

ಎರಡನೇ ವಿಮಾನ ನಿಲ್ದಾಣ ವಿಚಾರ: ತುಮಕೂರಿನಲ್ಲಿ ನಿರ್ಮಾಣವಾಗಬೇಕು ಎಂದು ನಾನು ಮೊದಲಿನಿಂದ ಹೇಳಿದ್ದೇನೆ ಎಂದ ಡಿಸಿಎಂ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರಿನಲ್ಲಿ ನಿರ್ಮಾಣವಾಗಬೇಕು ಎಂಬ ಇಚ್ಛೆಯನ್ನು ನಾನು ಮೊದಲಿನಿಂದಲೂ ಹೇಳಿದ್ದೇನೆ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, 2ನೇ ವಿಮಾನ‌ನಿಲ್ದಾಣ ತುಮಕೂರಿನಲ್ಲಿ ಆಗಬೇಕು ಎಂದು ಬಿ.ವೈ.ವಿಜಯೇಂದ್ರ ಅವರು ತಮಗೆ ತಿಳಿದ ರೀತಿಯಲ್ಲಿ ಹೇಳಿದ್ದಾರೆ. 2ನೇ ವಿಮಾನ ನಿಲ್ದಾಣ ತುಮಕೂರಿಗೆ ಆಗಬೇಕು ಎಂಬ ಇಚ್ಛೆಯನ್ನು ನಾನು ಮೊದಲಿನಿಂದಲೂ ಹೇಳಿದ್ದೇನೆ ಎಂದರು.

ತಾಂತ್ರಿಕ ಸಮಿತಿಯು ನೆಲಮಂಗಲದ ಕುಣಿಗಲ್ ರಸ್ತೆ ಹಾಗೂ ಬಿಡದಿ ಪ್ರದೇಶಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದು, ಡಿಜಿಸಿಎ ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ತುಮಕೂರಿನಲ್ಲಿ ವಿಮಾನ ನಿಲ್ದಾಣವಾದರೆ ಸುಮಾರು 20 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದ್ದು, ತಾಂತ್ರಿಕವಾಗಿಯೂ ಸೂಕ್ತ ಸ್ಥಳವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬಿಡದಿ ಟೌನ್‌ಶಿಪ್ ವಿರೋಧಿಸಿ ವಿಪಕ್ಷಗಳ ಪಾದಯಾತ್ರೆ ವಿಚಾರವಾಗಿ, ಸರ್ಕಾರ ಅಭಿವೃದ್ಧಿಯ ದೃಷ್ಟಿಯಿಂದ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಭೂಸ್ವಾಧೀನದ ವಿಚಾರದಲ್ಲಿ ಯಾರ ಮೇಲೂ ಒತ್ತಾಯ ಮಾಡುವುದಿಲ್ಲ. ಮನವೊಲಿಸುವ ಪ್ರಯತ್ನ ನಡೆಸಲಾಗುವುದು ಎಂದು ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ವಿಷಯವನ್ನು ರಾಜಕೀಯ ದೃಷ್ಟಿಯಿಂದ ನೋಡದೇ, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಇ-ಸ್ವತ್ತು ವಿತರಣೆಯನ್ನು ವೇಗಗೊಳಿಸಲು ಕಂದಾಯ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಹಲವು ವರ್ಷಗಳಿಂದ ಬಾಕಿ ಉಳಿದಿರುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರೊಂದಿಗೆ ಬೆಳಗಾವಿ ಕಂದಾಯ ವಿಭಾಗ, ಕಲಬುರ್ಗಿ ಕಂದಾಯ ವಿಭಾಗ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಬರ ಪರಿಸ್ಥಿತಿಯನ್ನು ಎದುರಿಸಲು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ನಾಳೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗುವುದು ಎಂದರು.

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ₹5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಒಟ್ಟು ₹329 ಕೋಟಿ ಲಭ್ಯವಿದೆ. ಇದಲ್ಲದೇ ಜಿಲ್ಲಾಧಿಕಾರಿಗಳ ಪಿಡಿ ಖಾತೆಗಳಲ್ಲಿ ಸುಮಾರು ₹600 ಕೋಟಿ ಲಭ್ಯವಿದ್ದು, ಅಗತ್ಯ ಸಂದರ್ಭಗಳಲ್ಲಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular