ಬೆಂಗಳೂರು: ದೇಶಾದ್ಯಂತ ಇಂದು 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಪರಪ್ಪನ ಅಗ್ರಹಾರ ಜೈಲಿನಲ್ಲಿಯೂ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದ್ದು, ಜೈಲು ಸೇರಿರುವ ನಟ ದರ್ಶನ್ ಹಾಗೂ ಪ್ರಜ್ವಲ್ ರೇವಣ್ಣ ಗೈರಾಗಿದ್ದಾರೆ.
ಪ್ರತಿವರ್ಷದಂತೆ ಈವರ್ಷವೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಜೈಲಿನಲ್ಲಿರುವ ವಿಚಾರಣಾಧೀನ ಆರೋಪಿಗಳು, ಸಜಾ ಬಂಧಿಗಳು ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಆದರೆ ಜೈಲಿನಲ್ಲಿರುವ ನಟ ದರ್ಶನ್, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಾತ್ರ ಭಾಗಿಯಾಗಿಲ್ಲ.
ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ, ವಿಡಿಯೋ ಚಿತ್ರೀಕರಣ ಕೇಸ್ ನಲ್ಲಿ ಜೈಲುಪಾಲಾಗಿರುವ ಪ್ರಜ್ವಲ್ ರೇವಣ್ಣ, ಜೈಲಿನ ಆವರಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಿಲ್ಲ. ರೇಣುಕಾಸ್ವಾಮಿ ಹತ್ಯೆಕೇಸ್ ನಲ್ಲಿ ನಿನ್ನೆ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ.