HomeKarnataka1 ಮೊಬೈಲ್‌ಗೆ ₹1 ಲಕ್ಷ, ಸಿಮ್‌ಗೆ ₹50 ಸಾವಿರ! ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಮತ್ತಷ್ಟು...

1 ಮೊಬೈಲ್‌ಗೆ ₹1 ಲಕ್ಷ, ಸಿಮ್‌ಗೆ ₹50 ಸಾವಿರ! ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಮತ್ತಷ್ಟು ಬಯಲು

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಅಕ್ರಮವಾಗಿ ಮೊಬೈಲ್‌ ಹಾಗೂ ಸಿಮ್‌ ಕಾರ್ಡ್‌ಗಳು ಪೂರೈಕೆಯಾಗುತ್ತಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹಲವು ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಒಂದು ಮೊಬೈಲ್‌ ಫೋನ್‌ ಅನ್ನು ಬರೋಬ್ಬರಿ ₹1 ಲಕ್ಷಕ್ಕೆ, ಸಿಮ್‌ ಕಾರ್ಡ್‌ ಅನ್ನು ₹50 ಸಾವಿರಕ್ಕೆ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮೊಬೈಲ್‌ ಪೂರೈಕೆ ಜಾಲದ ಬೆನ್ನತ್ತಿದಾಗ ಈ ಅಕ್ರಮ ಜಾಲ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಸಿಮ್‌ ಕಾರ್ಡ್‌ಗಳನ್ನು ಆ್ಯಕ್ಟಿವೇಟ್‌ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಆ್ಯಕ್ಟಿವೇಟ್‌ ಆಗುತ್ತಿದ್ದ ಸಿಮ್‌ ಕಾರ್ಡ್‌ಗಳು ಆಂಧ್ರಪ್ರದೇಶದಿಂದಲೇ ಮಾರಾಟವಾಗುತ್ತಿದ್ದವು. ಆದರೆ ಅವುಗಳನ್ನು ಬಳಸಲಾಗುತ್ತಿದ್ದುದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೈಲಿನಲ್ಲಿರುವ ಕೆಲ ಕೈದಿಗಳಿಗೆ ಮೊಬೈಲ್‌ ಫೋನ್‌ಗಳು ಹಾಗೂ ಸಿಮ್‌ ಕಾರ್ಡ್‌ಗಳು ಹೇಗೆ ತಲುಪುತ್ತಿದ್ದವು ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಾರ್ಡರ್‌ಗಳ ಮೂಲಕವೇ ಕೈದಿಗಳಿಗೆ ಮೊಬೈಲ್‌ಗಳು ಸರಬರಾಜಾಗುತ್ತಿದ್ದವು ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಜೈಲಿನಲ್ಲಿದ್ದುಕೊಂಡೇ ಕೈದಿಗಳು ಹೊರಗಿನಿಂದ ಮೊಬೈಲ್‌ ಹಾಗೂ ಸಿಮ್‌ಗಳನ್ನು ತರಿಸಿಕೊಳ್ಳುತ್ತಿದ್ದರೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸೇರಿದಂತೆ ಕೆಲವರು ಜೈಲಿನಲ್ಲಿದ್ದಾಗ ಮೊಬೈಲ್‌ ಬಳಸಿದ್ದರು ಎನ್ನಲಾದ ಆರೋಪಗಳ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮೊಬೈಲ್‌ ಮತ್ತು ಸಿಮ್‌ ಪೂರೈಕೆಯ ಹಿಂದೆ ಯಾರಿದ್ದಾರೆ, ಹಣದ ವಹಿವಾಟು ಹೇಗೆ ನಡೆಯುತ್ತಿತ್ತು ಹಾಗೂ ಜೈಲಿನೊಳಗೆ ಈ ಜಾಲಕ್ಕೆ ಯಾರು ಸಹಕರಿಸುತ್ತಿದ್ದರು ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆಯಾದ ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೊಬೈಲ್, ಸಿಮ್‌ ಹಾಗೂ ಪೆನ್‌ಡ್ರೈವ್‌ ಪೂರೈಕೆ ಮಾಡಿದ ಆರೋಪದಡಿ ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಆರೋಪಿಗಳೊಂದಿಗೆ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್‌ ಅವರನ್ನು ಎದುರುಬದುರು ಕೂರಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಜೈಲಿನಲ್ಲಿ ನಡೆದ ಸಿಸಿಬಿ ದಾಳಿ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಸಿಮ್‌, ಪೆನ್‌ಡ್ರೈವ್‌ ಹಾಗೂ ನೋಟ್‌ಬುಕ್‌ ಪತ್ತೆಯಾಗಿತ್ತು. ಆರಂಭದಲ್ಲಿ ಮೊಬೈಲ್ ತನ್ನದೇ ಎಂದು ಹೇಳಿದ್ದ ಪ್ರಜ್ವಲ್ ಬಳಿಕ ಅದು ತನ್ನದಲ್ಲ, ತನ್ನ ಜೊತೆಗಿದ್ದ ಪ್ರತಾಪ್‌ಗೆ ಸೇರಿದ್ದು ಎಂದು ಹೇಳಿಕೆ ನೀಡಿದ್ದರು. ಮೊಬೈಲ್‌ನ ಪಾಸ್‌ವರ್ಡ್‌ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸಿದ್ದರು.

ಪ್ರಕರಣದ ತನಿಖೆಗಾಗಿ ಪ್ರಜ್ವಲ್ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಬಾಡಿ ವಾರೆಂಟ್‌ ಮೇಲೆ ಪೊಲೀಸ್ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.. ಮೊಬೈಲ್ ಹಾಗೂ ಪೆನ್‌ಡ್ರೈವ್‌ಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ ಪರಿಶೀಲನೆ ನಡೆಸಲಾಗಿದೆ.

ಎಫ್‌ಎಸ್‌ಎಲ್‌ ಹಾಗೂ ಪೊಲೀಸ್ ತನಿಖೆಯಲ್ಲಿ ಮೊಬೈಲ್ ಮತ್ತು ಪೆನ್‌ಡ್ರೈವ್‌ನಲ್ಲಿ ಪ್ರಜ್ವಲ್‌ಗೆ ಸಂಪರ್ಕ ಹೊಂದಿರುವ ನಂಬರ್‌ಗಳು ಸೇರಿದಂತೆ ಹಲವು ಮಹತ್ವದ ಮಾಹಿತಿ ಪತ್ತೆಯಾಗಿದೆ ಎನ್ನಲಾಗಿದೆ. ಜೈಲಿನ ಸೆಲ್‌ಗೆ ಮೊಬೈಲ್ ಹೇಗೆ ತಲುಪಿತು ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೊಬೈಲ್‌ ಮತ್ತು ಸಿಮ್‌ ಪೂರೈಕೆಯಲ್ಲಿ ಐವರು ಆರೋಪಿಗಳ ಪಾತ್ರವಿದೆ ಎನ್ನಲಾಗಿದ್ದು, ಇಬ್ಬರು ಮೊಬೈಲ್‌ ನೀಡಿದ್ದರೆ, ಇನ್ನಿಬ್ಬರು ಸಿಮ್‌ ಕಾರ್ಡ್‌ ಒದಗಿಸಿದ್ದಾರೆ ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಓರ್ವ ಜೈಲು ವಾರ್ಡನ್‌ ಮೂಲಕ ಮೊಬೈಲ್‌ ಪ್ರಜ್ವಲ್‌ ಕೈಗೆ ತಲುಪಿದೆಯೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸಿದ್ದರು. ವಿಚಾರಣೆ ನಡೆಸಿದ ಬಳಿಕ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ರನ್ನು ಪೊಲೀಸರು ಕೋರ್ಟ್ ಎದುರು ಹಾಜರುಪಡಿಸಿದ್ದು, ನಂತರ ಕೋರ್ಟ್ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular