HomeKarnatakaBREAKING : ಪರಪ್ಪನ ಅಗ್ರಹಾರದಲ್ಲಿ ವಾರ್ಡರ್ ಮೇಲೆ ಹಲ್ಲೆ; ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ ಕೈದಿಗಳು!

BREAKING : ಪರಪ್ಪನ ಅಗ್ರಹಾರದಲ್ಲಿ ವಾರ್ಡರ್ ಮೇಲೆ ಹಲ್ಲೆ; ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ ಕೈದಿಗಳು!

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡರ್‌ ಮೇಲೆ ಕೈದಿಗಳು ಹಲ್ಲೆ ನಡೆಸಿ, ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಸೆಪ್ಟೆಂಬರ್ 2ರಂದು ಬೆಳಗ್ಗೆ ಸುಮಾರು 11.30ಕ್ಕೆ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಜೈಲಿನ ಶಿಕ್ಷಾ ಬಂಧಿ ವಿಭಾಗದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ವಾರ್ಡರ್‌ ಮಂಜುನಾಥ್‌ ಅವರು ಕೈದಿಗಳ ವಸ್ತುಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ, ಏಕಾಏಕಿ ಕೆಲ ಕೈದಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಮುಜಾಹಿಲ್, ಅಬ್ದುಲ್ ಶಫ್ಘಾನ್, ಮೊಹಮ್ಮದ್ ರಿಜ್ವಾನ್, ನಯಾಜ್, ಕಲಂದರ್ ಶಫಿ ಸೇರಿದಂತೆ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳು ವಾರ್ಡರ್‌ ಮಂಜುನಾಥ್ ಅವರನ್ನು ಬ್ಯಾರಕ್‌ನ ಕೊಠಡಿ ಸಂಖ್ಯೆ 4ಕ್ಕೆ ಎಳೆದೊಯ್ದು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಅವರ ಕುತ್ತಿಗೆಯನ್ನು ಬಲವಾಗಿ ಹಿಸುಕಿ ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.ಘಟನೆ ಗಮನಕ್ಕೆ ಬರುತ್ತಿದ್ದಂತೆ ಅಲ್ಲಿಗೆ ಬಂದ ಜೈಲು ಅಧಿಕಾರಿಗಳು ಮತ್ತು ಸಿಬ್ಬಂದಿ ಮಂಜುನಾಥ್ ಅವರನ್ನು ಆರೋಪಿಗಳಿಂದ ರಕ್ಷಿಸಿದ್ದಾರೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಾರ್ಡರ್‌ ಮಂಜುನಾಥ್‌ ಅವರ ಮೇಲೆ ಕೈದಿಗಳು ಹಲ್ಲೆ ನಡೆಸಿ, ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ ಘಟನೆಗೆ ಪ್ರಮುಖ ಕಾರಣ ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ತರಿಸಿಕೊಳ್ಳುವ ಪ್ರಯತ್ನ ಎನ್ನಲಾಗಿದೆ.

ಆಗಸ್ಟ್‌ 22ರಂದು ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳು ಜೈಲಿನೊಳಗೆ ಕೆಲವು ನಿಷೇಧಿತ ವಸ್ತುಗಳನ್ನು ತರಿಸಿಕೊಳ್ಳಲು ಯತ್ನಿಸಿದ್ದರು ಎನ್ನಲಾಗಿದೆ. ಈ ವೇಳೆ ಜಾಗರೂಕರಾಗಿದ್ದ ವಾರ್ಡರ್‌ ಮಂಜುನಾಥ್‌ ಹವೇಲಿ ಅವರು ಆ ವಸ್ತುಗಳನ್ನು ತಡೆಹಿಡಿದಿದ್ದರು.

ಇದರಿಂದ ಆಕ್ರೋಶಗೊಂಡಿದ್ದ ಆರೋಪಿಗಳು ಅಂದೇ ಮಂಜುನಾಥ್‌ ಅವರಿಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಬಳಿಕ ಜೈಲಿನೊಳಗಿನ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಿರುವುದು ಕೂಡ ಕೈದಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು ಎಂದು ತಿಳಿದುಬಂದಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್‌ 2ರಂದು ವಾರ್ಡರ್‌ ಮಂಜುನಾಥ್‌ ಅವರ ಮೇಲೆ ಆರೋಪಿಗಳು ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಅವರನ್ನು ಬ್ಯಾರಕ್‌ನ ಕೊಠಡಿ ಸಂಖ್ಯೆ 4ಕ್ಕೆ ಎಳೆದೊಯ್ದು ಹಲ್ಲೆ ನಡೆಸಿದ ಬಳಿಕ, ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಬಳಿಕ ಭದ್ರತಾ ದೃಷ್ಟಿಯಿಂದ ಆರೋಪಿಗಳನ್ನು ಅನೆಕ್ಸ್-1 ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular