HomeLatest NewsSHOCKING : ಪೋಷಕರೇ ಎಚ್ಚರ ; 'ಕುರ್‌ಕುರೆ' ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5...

SHOCKING : ಪೋಷಕರೇ ಎಚ್ಚರ ; ‘ಕುರ್‌ಕುರೆ’ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ಸಾವು.!

ಮೈಸೂರು: ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಗಿಫ್ಟ್ ಬಾಲ್‌ನ್ನು ನುಂಗಿದ ಪರಿಣಾಮ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಮುಕುಂದ್ ಮಯೂರ್ (5) ಎಂದು ಗುರುತಿಸಲಾಗಿದೆ. ಆತ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಗೌರಮ್ಮ ಹಾಗೂ ಶಂಕರ್ ನಾಯಕ್ ಅವರ ಮೊಮ್ಮಗ ಹಾಗೂ ಸಂತೋಷ್–ಐಶ್ವರ್ಯ ದಂಪತಿಯ ಏಕೈಕ ಪುತ್ರನಾಗಿದ್ದ. ಕುಟುಂಬದವರ ಮಾಹಿತಿ ಪ್ರಕಾರ, ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಸಣ್ಣ ಪ್ಲಾಸ್ಟಿಕ್ ಗಿಫ್ಟ್ ಬಾಲ್‌ನ್ನು ಆಟವಾಡುವ ವೇಳೆ ಬಾಲಕ ಆಕಸ್ಮಿಕವಾಗಿ ನುಂಗಿದ್ದಾನೆ.

ಪ್ಲಾಸ್ಟಿಕ್ ಬಾಲ್ ಗಂಟಲಿನಲ್ಲಿ ಸಿಲುಕಿದ ಪರಿಣಾಮ ಬಾಲಕ ಉಸಿರುಗಟ್ಟಿ ಅಸ್ವಸ್ಥನಾಗಿದ್ದಾನೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬದವರು ಪ್ರಯತ್ನಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ದುರ್ಘಟನೆಯಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಗೌರಿಪುರ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪೋಷಕರಿಗೆ ಎಚ್ಚರಿಕೆ

ಮಕ್ಕಳಿಗೆ ಚಿಪ್ಸ್, ಕುರ್‌ಕುರೆ ಸೇರಿದಂತೆ ಆಹಾರ ಪದಾರ್ಥಗಳನ್ನು ನೀಡುವಾಗ ಅವುಗಳಲ್ಲಿ ಆಟಿಕೆಗಳು ಅಥವಾ ಸಣ್ಣ ಪ್ಲಾಸ್ಟಿಕ್ ವಸ್ತುಗಳಿದ್ದರೆ ಅವುಗಳನ್ನು ಮೊದಲು ತೆಗೆದುಹಾಕಬೇಕು. ಇಂತಹ ಸಣ್ಣ ವಸ್ತುಗಳು ಮಕ್ಕಳ ಗಂಟಲಿನಲ್ಲಿ ಸಿಲುಕಿ ಜೀವಕ್ಕೆ ಅಪಾಯ ಉಂಟುಮಾಡುವ ಸಾಧ್ಯತೆ ಇರುವುದರಿಂದ ಪೋಷಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular