
ಮೃತ ಬಾಲಕನನ್ನು ನಿಶಾಲ್ ತೇಜ್ (12) ಎಂದು ಗುರುತಿಸಲಾಗಿದೆ. ಗಣಪತಿ ವಿಸರ್ಜನೆ ಮಾಡುವಾಗ ನೀರಿನಲ್ಲಿ ಇಳಿದ ಬಾಲಕ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ಮಾಡುವಾಗ ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು, ಇಲ್ಲವಾದಲ್ಲಿ ಇಂತಹ ಅವಘಡ ಸಂಭವಿಸುತ್ತದೆ.

