ಕೊಪ್ಪಳ: ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪ ಮನ್ನೇರಾಳ ಗ್ರಾಮದಲ್ಲಿ ನೀರಿನ ತೊಟ್ಟಿಯಲ್ಲಿ ಬಿದ್ದು ಮಗು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಅಪೂರ್ವ ಮಹಾಂತೇಶ ಕರಡಿ(3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಮನೆಯ ಸಮೀಪ ಇರುವ ನೀರಿನ ತೊಟ್ಟಿಯಲ್ಲಿ ಮಗು ಬಿದ್ದಿದೆ. ಕೂಡಲೇ ಪೋಷಕರು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಭಾನುವಾರವಾಗಿದ್ದ ಕಾರಣ ಆಸ್ಪತ್ರೆಯಲ್ಲೂ ವೈದ್ಯರು ಇರಲಿಲ್ಲ. ಹೀಗಾಗಿ ಇಳಕಲ್ಲ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
