HomeLatest Newsಪೋಷಕರೇ ಎಚ್ಚರ: ನೀರಿನ ತೊಟ್ಟಿಯಲ್ಲಿ ಬಿದ್ದು ಮಗು ಸಾವು

ಪೋಷಕರೇ ಎಚ್ಚರ: ನೀರಿನ ತೊಟ್ಟಿಯಲ್ಲಿ ಬಿದ್ದು ಮಗು ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪ ಮನ್ನೇರಾಳ ಗ್ರಾಮದಲ್ಲಿ ನೀರಿನ ತೊಟ್ಟಿಯಲ್ಲಿ ಬಿದ್ದು ಮಗು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಅಪೂರ್ವ ಮಹಾಂತೇಶ ಕರಡಿ(3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಮನೆಯ ಸಮೀಪ ಇರುವ ನೀರಿನ ತೊಟ್ಟಿಯಲ್ಲಿ ಮಗು ಬಿದ್ದಿದೆ. ಕೂಡಲೇ ಪೋಷಕರು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಭಾನುವಾರವಾಗಿದ್ದ ಕಾರಣ ಆಸ್ಪತ್ರೆಯಲ್ಲೂ ವೈದ್ಯರು ಇರಲಿಲ್ಲ. ಹೀಗಾಗಿ ಇಳಕಲ್ಲ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular