ಬೆಂಗಳೂರು: ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಪೂರೈಕೆಯಾಗಿಲ್ಲ. ಈಗಾಗಲೇ ನಮ್ಮ ಇಲಾಖೆ ಈ ಬಗ್ಗೆ ನಿಗಾ ವಹಿಸಿದ್ದು, ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ತಮಿಳುನಾಡು, ಪುದುಚೇರಿ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಅಲ್ಲಿನ ಭಾಗಗಳಲ್ಲಿ ಈ ಕಂಪನಿಯ ಸಿರಪ್ ಬಳಕೆಯಲ್ಲಿದ್ದು, ದುರ್ಘಟನೆ ಸಂಭವಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಇತರ ಕೆಮ್ಮಿನ ಸಿರಪ್‌ಗಳ ಮಾದರಿಗಳ ಪರೀಕ್ಷೆಯನ್ನು ಆರಂಭಿಸಲಾಗಿದೆ. ಇನ್ನೆರಡು ದಿನಗಳಲ್ಲಿ ವರದಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.