ಪೋಷಕರೇ ಗಮನಿಸಿ : ಆದರ್ಶ ವಿದ್ಯಾಲಯ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು : 2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಯ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ದಾಖಲಾತಿಯ ಪ್ರವೇಶ ಪರೀಕ್ಷೆಯ ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕ: 17/01/2024 ರಿಂದ 06/02/2024ರವರೆಗೆ ನಿಗದಿಪಡಿಸಲಾಗಿತ್ತು, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲು ಉಲ್ಲೇಖದಂತೆ ಬೇಡಿಕೆಗಳು ಬಂದಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ದಾಖಲಾತಿಯ ಆನ್‌ಲೈನ್ ಅರ್ಜಿ ಸಲ್ಲಿಕೆ ದಿನಾಂಕವನ್ನು ಈ ಕೆಳಗಿನಂತೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 11.02.2024

ಅರ್ಜಿಗಳ ಪರಿಶೀಲನೆ : 13.02.2024

Withheld ಅರ್ಜಿಗಳ ಪರಿಶೀಲನೆ : 17.02.2024

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read