ಬೆಂಗಳೂರು : ಆದರ್ಶ ವಿದ್ಯಾಲಯದ 2024-25 ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪಾಲಕರು ಹಾಗೂ ಯಲಬುರ್ಗಾ/ಕುಕನೂರು ತಾಲ್ಲೂಕಿನ ಎಲ್ಲ ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರು ಇಲಾಖೆಯ ವೆಬ್‌ಸೈಟ್: www.schooleducation.kar.nic.in ಮತ್ತು vidyavahini.karnataka.gov.in ಮೂಲಕ ಫೆಬ್ರವರಿ 06 ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಪ್ರಸ್ತುತ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯ ಸ್ಯಾಟ್ಸ್ ನಂಬರ್, ಇತ್ತೀಚಿನ ಭಾವ ಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಪೋಷಕರ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಗಳನ್ನು ಒದಗಿಸಬೇಕು. ಬೇರೆ ತಾಲ್ಲೂಕು/ ಜಿಲ್ಲೆ/ ರಾಜ್ಯಗಳ ಮಕ್ಕಳು ಕಡ್ಡಾಯವಾಗಿ ವ್ಯಾಸಂಗ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಬೇಕು. ಆಯ್ಕೆಯಾದ ಪಕ್ಷದಲ್ಲಿ ಸಕ್ಷಮ ಪ್ರಾಧಿಕಾರದಿಂದ ದಾಖಲಾತಿ ಪಡೆಯುವ ಸಂದರ್ಭದಲ್ಲಿ ವಾಸಸ್ಥಳ ಪ್ರಮಾಣ ಪತ್ರ ಹಾಜರುಪಡಿಸಬೇಕು.