HomeLatest Newsಪೋಷಕರೇ ಗಮನಿಸಿ : ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ನವೀಕರಣ ಕಡ್ಡಾಯ

ಪೋಷಕರೇ ಗಮನಿಸಿ : ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ನವೀಕರಣ ಕಡ್ಡಾಯ

ಶಿವಮೊಗ್ಗ : ಜಿಲ್ಲೆಯ ಎಲ್ಲಾ 5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ನವೀಕರಣ ಮಾಡುವುದು ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆ. 30 ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದ್ದು, ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ.

ಇದರಿಂದ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿಧ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ. ಪೋಷಕರು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಯನ್ನು ಸಕಾಲದಲ್ಲಿ ತಲುಪಿಸುವಲ್ಲಿ ಸಹಕರಿಸುವಂತೆ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಗಲ್: ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ :   ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸಾಗರ ತಾಲೂಕು ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಎಸ್.ಎಸ್.ಎಲ್.ಸಿ./ಪಿ.ಯು.ಸಿ./ ಪದವಿ ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್‌ಸೈಟ್ www.cite.karnataka.gov.in ಮೂಲಕ ಮೇ 09 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08186-200221/ 9448315128/ 8217882239 ಗಳನ್ನು ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular