HomeLatest NewsBIG NEWS : ಪೋಷಕರೇ ಗಮನಿಸಿ : ಡಿ. 21 ರಂದು ತಪ್ಪದೇ ಮಕ್ಕಳಿಗೆ 'ಪಲ್ಸ್...

BIG NEWS : ಪೋಷಕರೇ ಗಮನಿಸಿ : ಡಿ. 21 ರಂದು ತಪ್ಪದೇ ಮಕ್ಕಳಿಗೆ ‘ಪಲ್ಸ್ ಪೋಲಿಯೋ ಲಸಿಕೆ’ ಹಾಕಿಸಿ

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಡಿಸೆಂಬರ್ 21, 2025 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಯತೀಶ್ ಆರ್ ಅವರು ತಿಳಿಸಿದರು.

ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಡಿಸೆಂಬರ್ 21, 2025 ರಂದು ನಡೆಯುವ ಪಲ್ಸ್ ಪೋಲಿಯೋ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಜನಸಂಖ್ಯೆ 17,27,638 ಇದ್ದು, ಇದರಲ್ಲಿ ನವಜಾತ ಶಿಶುವಿನಿಂದ -05 ವರ್ಷದೊಳಗಿನ ಮಕ್ಕಳ ಸಂಖ್ಯೆ ಸುಮಾರು 1,99,189 ಇದ್ದಾರೆ ಎಂದು ಮಾಹಿತಿ ನೀಡಿದರು.
ಸುಮಾರು 782 ಬೂತ್ ಗಳಲ್ಲಿ, 39 ಟ್ರಾನಿಟ್ಸ್ ಟೀಂ ಗಳಲ್ಲಿ ಹಾಗೂ 113 ಮೊಬೈಲ್ ಟೀಂ ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತದೆ. ಒಟ್ಟು 3128 ಲಸಿಕಾ ಕಾರ್ಯಕರ್ತರು, 157 ಮೇಲ್ವಿಚಾರಕಗಳು ಈ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ರವೀಂದ್ರನಾಥ್ ಎಂ ಮೇಟಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ನದೀಮ್ ಅಹಮದ್, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಭುಜಬಲಿ ಯಲಗುದ್ರಿ, ಡಾ.ರಮೇಶ್, ಡಾ.ಮಂಜು, ಡಾ.ಶರತ್ ಬಾಬು, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ನಂದಿನಿ, ಡಾ.ಶೈಲಕುಮಾರ್, ಡಾ.ರವಿ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ರೇವಣ್ಣ.ಎಂ. ವಿಂಧ್ಯಾ ಎಂ.ಆರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ದತ್ತಾತ್ರೇಯ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular