HomeLatest Newsಪೋಷಕರೇ ಗಮನಿಸಿ: ಮಕ್ಕಳಿಗೆ ಕೆಮ್ಮಿನ ಸಿರಪ್ ಬಳಕೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಪೋಷಕರೇ ಗಮನಿಸಿ: ಮಕ್ಕಳಿಗೆ ಕೆಮ್ಮಿನ ಸಿರಪ್ ಬಳಕೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೆಮ್ಮಿನ ಸಿರಪ್ ಗಳ ದುರುಪಯೋಗದಿಂದಾಗಿ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾವುಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಎಲ್ಲಾ ಮಕ್ಕಳ ಸುರಕ್ಷತೆಯನ್ನು ಕಾಪಾಡಲು, ಪೋಷಕರು, ಆರೈಕೆದಾರರು ಮತ್ತು ಸಾರ್ವಜನಿಕರು ಈ ಕೆಳಗಿನ ಮಾರ್ಗದರ್ಶನಗಳನ್ನು ಅನುಸರಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.

 ಚಿಕ್ಕ ಮಕ್ಕಳಿಗೆ ಕೆಮ್ಮಿನ ಸಿರಪ್ ಗಳನ್ನು ನೀಡಬೇಡಿ,

 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್ ಗಳನ್ನು ನೀಡಬಾರದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

  2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಈ ಔಷಧಿಗಳನ್ನು ನೀಡುವುದು.

ಹಿರಿಯ ಮಕ್ಕಳಲ್ಲಿ

 ಕೆಮ್ಮಿನ ಸಿರಪ್ ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ಬಳಸಬೇಕು.

ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಅನ್ನು ಬಳಸಿ.

ಬಹು ಔಷಧಿಗಳ ಸಂಯೋಜನೆ ಇರುವ ಸಿರಪ್ ಗಳನ್ನು ಉಪಯೋಗಿಸಬಾರದು.

 ಸುರಕ್ಷಿತ ಮನೆಮದ್ದುಗಳು

 ಹೆಚ್ಚಿನ ಸಂದರ್ಭಗಳಲ್ಲಿ ಮಕ್ಕಳಲ್ಲಿ ಕೆಮ್ಮು ಮತ್ತು ಶೀತವು ಸೌಮ್ಯವಾಗಿರುತ್ತದೆ ಮತ್ತು ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ.

ಪೋಷಕರು ಮಕ್ಕಳಿಗೆ,

ಸಾಕಷ್ಟು ದ್ರವಪದಾರ್ಥಗಳನ್ನು ನೀಡುವುದು

ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು

ಪೌಷ್ಟಿಕ ಆಹಾರವನ್ನು ನೀಡುವುದು

ಸ್ವಯಂ ಔಷಧೋಪಚಾರ ಮಾಡಬೇಡಿ

ವೈದ್ಯರ ಪ್ರಿಸ್ಕ್ರಿಪ್ಪನ್ ಇಲ್ಲದೆ ಕೆಮ್ಮಿನ ಸಿರಪ್ ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ.

ಈ ಹಿಂದೆ ಬಳಸಿ ಉಳಿದ ಔಷಧಿಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಿಗಳನ್ನು ಬಳಸುವುದನ್ನು ನಿಲ್ಲಿಸಿ.

ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆಯನ್ನು ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ವರದಿ ಮಾಡಿ.

ಯಾವಾಗಲೂ ಔಷಧದ ಅವಧಿ ಮುಗಿಯುವ ದಿನಾಂಕಗಳನ್ನು (expiry date) ಪರಿಶೀಲಿಸಿ ಮತ್ತು ಲೇಬಲ್ ಗಳನ್ನು ಎಚ್ಚರಿಕೆಯಿಂದ ಓದಿ.

ನಿಮ್ಮ ಮಕ್ಕಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ:

ಉಸಿರಾಟದ ತೊಂದರೆ ಅಥವಾ ವೇಗವಾಗಿ ಉಸಿರಾಟ

ನಿರಂತರ ಅಥವಾ ಉಲ್ಬಣಗೊಳ್ಳುತ್ತಿರುವ ಕೆಮ್ಮು

ಅತಿಯಾದ ಜ್ವರ ಅಥವಾ ಆಹಾರ ತಿರಸ್ಕರಿಸುವುದು.

ನಿದ್ರಾವಸ್ಥೆ ಅಥವಾ ಅಸಹಜ ಪ್ರತಿಕ್ರಿಯೆ

ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ಔಷಧಿಗಳ ತರ್ಕಬದ್ದ ಬಳಕೆಯನ್ನು ಉತ್ತೇಜಿಸಲು ಮತ್ತು ಕೆಮ್ಮು ಸಿರಪ್ ಗಳ ಅನುಚಿತ ಬಳಕೆಯಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಈ ಸಲಹೆಯನ್ನು ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular