ಪರೇಶ್ ಮೇಸ್ತಾ ಸಾವು ಖಂಡಿಸಿ ಗಲಭೆ ಪ್ರಕರಣ: 122 ಜನರ ಮೇಲಿನ ಕೇಸ್ ವಾಪಸ್ ಪಡೆದ ಸರ್ಕಾರ

ಬೆಂಗಳೂರು: ಹೊನ್ನಾವರದ ಪರೇಶ್ ಮೇಸ್ತಾ ಸಾವು ಖಂಡಿಸಿ ನಡೆದ ಗಲಭೆ ಪ್ರಕರಣದಲ್ಲಿ  122 ಜನರ ಮೇಲೆ ಹಾಕಲಾಗಿದ್ದ ಕೇಸ್ ಹಿಂಪಡೆದುಕೊಳ್ಳಲಾಗಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಭಜರಂಗದಳ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಕೇಸ್ ಗಳನ್ನು ಸರ್ಕಾರದಿಂದ ವಾಪಸ್ ಪಡೆಯಲಾಗಿದೆ. 122 ಜನರ ಮೇಲಿದ್ದ ಮೂರು ಪ್ರಕರಣ ಹಿಂಪಡೆಯುವಂತೆ ಸಿಎಂ ಆದೇಶಿಸಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರ 16 ಪ್ರಕರಣಗಳನ್ನು ಹಿಂಪಡೆದುಕೊಂಡಿತ್ತು. 2017ರಲ್ಲಿ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಹಿಂದೂಪರ ಸಂಘಟನೆಗಳು ಧರಣಿ ನಡೆಸಿದ್ದವು. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದ ಧರಣಿ ಹಿಂಸಾಚಾರಕ್ಕೆ ತಿರುಗಿತ್ತು. ಘರ್ಷಣೆ ಸಂಬಂಧ 122 ಜನರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದವು. ಮೂರು ಪ್ರಕರಣ ಹಿಂಪಡೆದು ಸರ್ಕಾರ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read