ರಾಘವ್ ಚಡ್ಡಾ – ಪರಿಣಿತಿ ಚೋಪ್ರಾ ವಿವಾಹ ನಿಶ್ಚಿತಾರ್ಥ ಕೊನೆಗೂ ಫಿಕ್ಸ್

ರಾಜಕೀಯ ಅಂಗಳ ಸೇರಿದಂತೆ ಬಾಲಿವುಡ್ ನಲ್ಲಿ ಗುಲ್ಲೆಬ್ಬಿಸಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ ಮತ್ತು ನಟಿ ಪರಿಣಿತಿ ಚೋಪ್ರಾ ಜೋಡಿ ನಿಶ್ಚಿತಾರ್ಥದ ದಿನಾಂಕ ನಿಗದಿಯಾಗಿದೆ. ‌

ಶನಿವಾರ ಮೇ 13 ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಮಾರಂಭ ನಡೆಯಲಿದೆ. ನಿಶ್ಚಿತಾರ್ಥ ಸಮಾರಂಭಕ್ಕೆ ಸುಮಾರು 150 ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರನ್ನು ಆಹ್ವಾನಿಸಲಾಗಿದೆ.

ಮದುವೆಯ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ, ಆದರೆ ಈ ವರ್ಷದ ಕೊನೆಯಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ನಟಿ ಪರಿಣಿತಿ ಚೋಪ್ರಾ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಹಲವಾರು ಸಂದರ್ಭಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಂತರ ಇಬ್ಬರ ನಡುವೆ ಪ್ರೀತಿಯಿದೆ ಎಂಬ ಮಾತು ಹೆಚ್ಚಾಗಿ ಕೇಳಿಬರುತ್ತಿತ್ತು.

ತೀರಾ ಇತ್ತೀಚೆಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡು ತಮ್ಮ ಸಂಬಂಧವನ್ನ ದೃಢಪಡಿಸಿದ್ರು. ಇದೀಗ ಮೇ 13 ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದು ತಮ್ಮ ಪ್ರೀತಿಯನ್ನು ಅಧಿಕೃತಗೊಳಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read