Paris Olympics: ಆ.15ರಂದು ಪ್ರಧಾನಿ ಮೋದಿಯವರಿಂದ ಎಲ್ಲ ಕ್ರೀಡಾಪಟುಗಳ ಭೇಟಿ

ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 15 ರಂದು ದೆಹಲಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾಗವಹಿಸಿದ ಭಾರತೀಯ ಆಟಗಾರರನ್ನು ಭೇಟಿಯಾಗಲಿದ್ದಾರೆ.  ಧ್ವಜಾರೋಹಣದ ನಂತರ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಮೋದಿ ಭಾರತೀಯ ತುಕಡಿಯನ್ನು ಭೇಟಿಯಾಗಲಿದ್ದಾರೆ.

2024 ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತವು 117 ಅಥ್ಲೀಟ್‌ಗಳನ್ನು ಕಳುಹಿಸಿತ್ತು. ಪ್ರಧಾನಿ ಮೋದಿ ಎಲ್ಲರನ್ನೂ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಒಂದು ಬೆಳ್ಳಿ ಮತ್ತು ಐದು ಕಂಚು ಸೇರಿದಂತೆ ಒಟ್ಟು ಆರು ಪದಕಗಳನ್ನು ಗೆದ್ದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಅಥ್ಲೀಟ್‌ಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಈಗಾಗಲೇ ಅಭಿನಂದನೆ ಸಲ್ಲಿಸಿದ್ದಾರೆ. ಇದಲ್ಲದೆ, 100 ಗ್ರಾಂ ಅಧಿಕ ತೂಕದ ಕಾರಣ ಅಂತಿಮ ಪಂದ್ಯದಲ್ಲಿ ಅನರ್ಹಗೊಂಡ ವಿನೇಶ್ ಫೋಗಟ್ ಅವರನ್ನು ಬೆಂಬಲಿಸಿ ಮೋದಿ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದರು.

ಪ್ಯಾರಿಸ್‌ ಒಲಂಪಿಕ್ಸ್‌ ನಲ್ಲಿ ಭಾರತ ತಂಡವು ಜಾವೆಲಿನ್‌ನಲ್ಲಿ ಬೆಳ್ಳಿ ಸೇರಿದಂತೆ ಒಟ್ಟು ಆರು ಪದಕಗಳನ್ನು ಗೆದ್ದುಕೊಂಡಿದೆ. ಶೂಟಿಂಗ್, ಹಾಕಿ ಮತ್ತು ಕುಸ್ತಿಯಲ್ಲಿ ಕಂಚಿನ ಪದಕಗಳು ಬಂದವು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ಒಟ್ಟು 7 ಪದಕಗಳನ್ನು ಗೆದ್ದಿತ್ತು ಮತ್ತು ಪ್ಯಾರಿಸ್‌ನಲ್ಲಿ ಈ ಅಂಕಿಅಂಶ ಕುಸಿದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read