HomeKarnatakaಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ: ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್ಳಲಿ; ನಮ್ಮದೇನೂ ಅಭ್ಯಂತರವಿಲ್ಲ ಎಂದ ಡಿಸಿಎಂ

ಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ: ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್ಳಲಿ; ನಮ್ಮದೇನೂ ಅಭ್ಯಂತರವಿಲ್ಲ ಎಂದ ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್ಳಲಿ ನಮ್ಮದೇನೂ ಅಭ್ಯಂತರವಿಲ್ಲ ಎಂದು ಟಾಂಗ್ ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ಯಾರ ಫೋಟೊ ಇಟ್ಟುಕೊಂಡಾದರೂ ಎಲೆಕ್ಷನ್ ಗೆ ಹೋಗಲಿ, ಯಾರನ್ನು ಬೇಕಾದ್ರೂ ಜೋಡಿ ಮಾಡಿಕೊಳ್ಳಲಿ ನಮಗೇನು ಅಭ್ಯಂತರವಿಲ್ಲ ಎಂದು ಹೇಳಿದರು.

ಇನ್ನು ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವೇ ಇಲ್ಲ. ಇಂಡಿಯಾ ಮೈತ್ರಿಕೂಟ ಭಾರತ ದೇಶವನ್ನು ಆಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular