HomeKarnatakaBREAKING NEWS : ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

BREAKING NEWS : ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು : ಜೂನ್ 30 ರಂದು ನಡೆಯಲಿರುವ ಪರಿಷತ್ ಉಪ ಚುನಾವಣೆಗೆ ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೋಸರಾಜು, ತಿಪ್ಪಣ್ಣಪ್ಪ ಕಮಕನೂರ್ ಹೆಸರನ್ನು ಘೋಷಿಸಲಾಗಿದೆ.
ಕರ್ನಾಟಕ ವಿಧಾನ ಪರಿಷತ್ ಸದಸ್ಯರ ಉಪಚುನಾವಣೆಯು ಜೂನ್ 30 ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ ಆಗಿದೆ.

ಜೂನ್ 20 ನಾಳೆ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಿದೆ. ಜೂನ್ನಲ್ಲಿ ಮೂವರು ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುವ ಕಾರಣ ಉಪಚುನಾವಣೆ ಅನಿವಾರ್ಯವಾಗಿತ್ತು. ಶಾಸಕರಾದ ಸವದಿ ಲಕ್ಷ್ಮಣ್ ಮತ್ತು ಬಾಬುರಾವ್ ಚಿಂಚನಸೂರ್ ಅವರ ಅವಧಿ ಕ್ರಮವಾಗಿ ಜೂನ್ 14 ಮತ್ತು ಜೂನ್ 17 ರಂದು ಕೊನೆಗೊಂಡರೆ, ಆರ್. ಶಂಕರ್ ಅವರ ಅವಧಿ ಜೂನ್ 30 ರಂದು ಕೊನೆಗೊಳ್ಳಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪಚುನಾವಣೆಯ ವೇಳಾಪಟ್ಟಿ
ಜೂನ್ 13: ಅಧಿಸೂಚನೆ ಹೊರಡಿಸುವುದು
ಜೂನ್ 20: ನಾಮನಿರ್ದೇಶನ ಮಾಡಲು ಕೊನೆಯ ದಿನಾಂಕ
ಜೂನ್ 21: ನಾಮನಿರ್ದೇಶನಗಳ ಪರಿಶೀಲನೆ
ಜೂನ್ 23: ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕ
ಜೂನ್ 30: ಮತದಾನದ ದಿನಾಂಕ
ಜೂನ್ 30: ಮತಗಳ ಎಣಿಕೆ
ಜೂನ್ 30 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular