ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ಪೊಲಿಟಿಕ್ಸ್ ಆರಂಭವಾಗಿದೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಅಡ್ಡಮತದಾನದ ಭೀತಿ ಶುರುವಾಅಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತನ್ನ ಎಲ್ಲಾ ಶಾಸಕರನ್ನು ಬಿಡದಿಯ ವಂಡರ್‌ಲಾ ರೆಸಾರ್ಟ್‌ಗೆ ಶಿಫ್ಟ್ ಮಾಡಲು ನಿರ್ಧರಿಸಿದೆ.
ಕಾಂಗ್ರೆಸ್ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಕ್ಕೆ ಕಾಂಗ್ರೆಸ್ ಮುಂದಾಗಿದ್ದು, ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿಯನ್ನೂ ಹಮ್ಮಿಕೊಂಡಿದೆ.
ಕಾಂಗ್ರೆಸ್ ನ ಎಲ್ಲಾ ಶಾಸಕರು ಬಿಡಡಿ ಬಳಿಯ ವಂದರ್ ಲಾ ರೆಸಾರ್ಟ್ ಗೆ ಶಿಫ್ಟ್ ಆಗಲಿದ್ದು, ರೆಸಾರ್ಟ್ ನಲ್ಲಿ ಒಟ್ಟು 140 ರೂಂ ಬುಕ್ಕಿಂಗ್ ಆಗಿದೆ. ನಾಳೆ ಹಾಗೂ ನಾಡಿದ್ದು ಕಾಂಗ್ರೆಸ್ ಶಾಸಕರು ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಕಾಂಗ್ರೆಸ್ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆ ಅಡ್ಡ ಮತದಾನದ ಭೀತಿ ಶುರುವಾಗಿರುವ ಹಿನ್ನೆಲೆ ರೆಸಾರ್ಟ್‌ಗೆ ಶಾಸಕರನ್ನು ಶಿಫ್ಟ್ ಮಾಡಲಾಗುತ್ತಿದೆ. ಪಕ್ಷೇತರ ಶಾಸಕರನ್ನು ಕೂಡ ಹೆಚ್ಡಿಕೆ ಸಂಪರ್ಕ ಮಾಡಿದ್ದಾರೆಂಬ ಅನುಮಾನ ಹಿನ್ನೆಲೆ ಶಾಸಕರನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಕಸರತ್ತು ಶುರುವಾಗಿದೆ. ಜೂ.18ರಂದು ತಂಡ ತಂಡವಾಗಿ ತೆರಳಲಿರುವ ಕಾಂಗ್ರೆಸ್ ಶಾಸಕರು, ನೇರವಾಗಿ ವಿಧಾನಸೌಧಕ್ಕೆ ಬಂದು ಮತದಾನ ಮಾಡಲಿದ್ದಾರೆ.
ಡಿ.ಕೆ.ಶಿವಕುಮಾರ್ ಸಿಎಂ ಆದ ಬಳಿಕ ಮೊದಲ ಸಿಎಲ್ಪಿ ಸಭೆ ನಾಳೆ ಸಂಜೆ 6 ಗಂಟೆಗೆ ಬಿಡದಿಯ ವಂಡರ್‌ಲಾ ರೆಸಾರ್ಟ್ನಲ್ಲಿಯೇ ನಡೆಯಲಿದೆ. ಸಿಎಲ್ಪಿ ಸಭೆಯಲ್ಲಿ ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿ ನಡೆಯಲಿದ್ದು, ಒಂದೇ ಒಂದು ಮತವೂ ತಪ್ಪಾಗದಂತೆ ಎಚ್ಚರ ವಹಿಸಿ ಟ್ರೈನಿಂಗ್ ತಯಾರಿ ನಡೆದಿದೆ. ಅಡ್ಡ ಮತದಾನ, ಮತಗಳ ಅಸಿಂಧು, ಯಾರಿಗೆ ಮತ ಹಾಕಬೇಕೆಂಬ ಗೊಂದಲಗಳನ್ನು ತಪ್ಪಿಸಲು ರೆಸಾರ್ಟ್ ಪಾಲಿಟಿಕ್ಸ್ಗೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.

