ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ : ಪೊಲೀಸರಿಂದ ಸಂಸದ ಪ್ರತಾಪ್ ಸಿಂಹ ವಿಚಾರಣೆ ಸಾಧ್ಯತೆ..!

ನವದೆಹಲಿ : ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಸ್ ನೀಡಿರುವ ಆರೋಪ ಹೊತ್ತಿರುವ ಸಂಸದ ಪ್ರತಾಪ್ ಸಿಂಹ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದೆಹಲಿ ಪೊಲೀಸರು ಸಂಸದ ಪ್ರತಾಪ್ ಸಿಂಹ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ಪ್ರತಾಪ್ ಸಿಂಹಗೆ ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದು, ಶೀಘ್ರ ಬುಲಾವ್ ನೀಡಲಿದ್ದಾರೆ ಎನ್ನಲಾಗಿದೆ.ಲೋಕಸಭೆಯ ಭದ್ರತಾ ಉಲ್ಲಂಘನೆಯ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬಹುದು ಎನ್ನಲಾಗಿದೆ.

ಇನ್ನೂ, ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಪ್ರತಾಪ್ ಸಿಂಹ 3-4 ಬಾರಿ ಸಂಸತ್ ಪಾಸ್ ನೀಡಿದ್ದಾದರೂ ಏಕೆ?

”ಮನೋರಂಜನ್ ಎನ್ನುವ ವ್ಯಕ್ತಿ ಗೊತ್ತಿಲ್ಲದೇ ಇದ್ದರೆ ಸಂಸದ ಪ್ರತಾಪ್ ಸಿಂಹ ಅವರು 3-4 ಬಾರಿ ಸಂಸತ್ ಪಾಸ್ ನೀಡಿದ್ದಾದರೂ ಏಕೆ? ಕ್ಷೇತ್ರದ ಹೊರಗಿನ ವ್ಯಕ್ತಿಗಳಾದ ಸಾಗರ್ ಶರ್ಮ, ಲಲಿತ್ ಝಾರಿಗೆ ಪಾಸ್ ನೀಡಿದ್ದು ಏಕೆ? ಪ್ರತಾಪ್ ಸಿಂಹ ಅವರೇ, ಮನೋರಂಜನ್ ಮತ್ತು ಸಾಗರ್ ಶರ್ಮ ಅವರನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ಭೇಟಿಮಾಡಿಸಿದ್ದೀರಾ? ಎಂದು” ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಪ್ರಶ್ನಿಸಿದ್ದಾರೆ.

”ಸಂಸತ್ ಭವನಕ್ಕೆ ನುಗ್ಗಿದ್ದ ಆರೋಪಿ ಮನೋರಂಜನ್ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಐಟಿ ಸೆಲ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ. ಆರೋಪಿಗಳಾದ ಸಾಗರ್ ಶರ್ಮ, ಮನೋರಂಜನ್ ಮತ್ತು ಲಲಿತ್ ಝಾ, ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಲ್ಲಿ ಅವರ ಜೊತೆಯೇ ಮೂರು ಬಾರಿ ಸಭೆ ನಡೆಸಿದ್ದಾರೆ. ಪೊಲೀಸರು ಈ ಕೂಡಲೇ ಪ್ರತಾಪ್ ಸಿಂಹ ಅವರ ಕಚೇರಿಯನ್ನು ಸೀಲ್ ಮಾಡಿ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ವಶಪಡಿಸಿಕೊಳ್ಳಬೇಕು” ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆಗ್ರಹಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read