HomeIndiaಸಂಸತ್ ಭದ್ರತಾ ಲೋಪ ಪ್ರಕರಣ; ಪೊಲೀಸರಿಂದ ಇತ್ತಿಬ್ಬರ ವಿಚಾರಣೆ

ಸಂಸತ್ ಭದ್ರತಾ ಲೋಪ ಪ್ರಕರಣ; ಪೊಲೀಸರಿಂದ ಇತ್ತಿಬ್ಬರ ವಿಚಾರಣೆ

ನವದೆಹಲಿ: ಸಂಸತ್ ನಲ್ಲಿ ಭಾರಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತಿಬ್ಬರ ವಿಚಾರಣೆ ನಡೆಸಿದ್ದಾರೆ.

ಲೋಕಸಭಾ ಕಲಾಪ ನಡೆಯುತ್ತಿದ್ದಾಗ ಪ್ರೇಕ್ಷಕ ಗ್ಯಾಲಯಿಂದ ಜಿಗಿದಿದ್ದ ಮನೋರಂಜನ್ ಸಹಪಾಠಿ ಬಾಗಲಕೋಟೆ ಮೂಲದ ಸಾಯಿಕೃಷ್ಣ ಹಾಗೂ ಉತ್ತರ ಪ್ರದೇಶ ಮೂಲದ ಇನ್ನೋರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಮನೋರಂಜನ್ ಡೈರಿಯಲ್ಲಿ ಬಾಗಲಕೋಟೆ ಮೂಲದ ಸಾಯಿಕೃಷ್ಣ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಾಯಿಕೃಷ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮನೋರಂಜನ್ ಹಾಗೂ ಸಾಯಿಕೃಷ್ಣ ಇಬ್ಬರೂ ಬೆಂಗಳೂರಿನ ಬಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಹಪಾಠಿಗಳು ಮಾತ್ರವಲ್ಲ ಒಂದೇ ರೂಮಿನಲ್ಲಿ ವಾಸವಾಗಿದ್ದರು.

ಇನ್ನು ಸಂಸತ್ ಭದ್ರತಾ ಲೋಪ ಪ್ರಕರಣ ಸಂಬಂಧ ಸಾಗರ್ ಶರ್ಮಾ, ಮನೋರಂಜನ್, ಅಮೋಲ್ ಶಿಂಧೆ, ನೀಲಂ ಶರ್ಮಾ, ಲಲಿತ್ ಝಾ, ಮಹೇಶ್ ಕುಮಾವತ್ ಸೇರಿದಂತೆ 6 ಜನರನ್ನು ಬಂಧಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular