HomeIndiaಇಂದಿನಿಂದ ಸಂಸತ್ ವಿಶೇಷ ಅಧಿವೇಶನ: ಏಕರೂಪ ಸಂಹಿತೆ, ಏಕ ಚುನಾವಣೆ ಅಚ್ಚರಿ ನಿರ್ಧಾರ ಸಾಧ್ಯತೆ

ಇಂದಿನಿಂದ ಸಂಸತ್ ವಿಶೇಷ ಅಧಿವೇಶನ: ಏಕರೂಪ ಸಂಹಿತೆ, ಏಕ ಚುನಾವಣೆ ಅಚ್ಚರಿ ನಿರ್ಧಾರ ಸಾಧ್ಯತೆ

ನವದೆಹಲಿ: ಸಂಸತ್ ವಿಶೇಷ ಅಧಿವೇಶನ ಇಂದಿನಿಂದ ಐದು ದಿನಗಳ ಕಾಲ ನಡೆಯಲಿದೆ. ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ, ಏಕರೂಪ ನಾಗರಿಕ ಸಂಹಿತೆ ಮತ್ತು ಒನ್ ನೇಷನ್ ಒನ್ ಎಲೆಕ್ಷನ್ ಸೇರಿದಂತೆ 8 ಮಸೂದೆಗಳನ್ನು ಮಂಡಿಸುವ ಸಾಧ್ಯತೆ ಇದೆ.

ಸಂಸತ್ತಿನ 75 ವರ್ಷಗಳ ಹಾದಿಯ ಬಗ್ಗೆ ಚರ್ಚೆ ಮತ್ತು ನಾಲ್ಕು ಮಸೂದೆ ಮಂಡನೆ ಉದ್ದೇಶವನ್ನು ಈ ವಿಶೇಷ ಅಧಿವೇಶನದಲ್ಲಿ ಹೊಂದಿರುವುದಾಗಿ ಸರ್ಕಾರ ಹೇಳಿದೆ. ಆದರೆ, ಸಂಸತ್ ಮುಂಗಾರು ಅಧಿವೇಶನಕ್ಕೆ ಮುಗಿದು ಒಂದೂವರೆ ತಿಂಗಳು ಪೂರ್ಣವಾಗುವ ಮೊದಲೇ ವಿಶೇಷ ಅಧಿವೇಶನ ಕರೆದಿರುವುದು ಅಚ್ಚರಿಯ ನಿರ್ಧಾರ ಕೈಗೊಳ್ಳುವ ಉದ್ದೇಶವಿರಬಹುದು ಎಂದು ಹೇಳಲಾಗಿದೆ. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ಒಂದು ದೇಶ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆಯಂತಹ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular