HomeIndiaBIG NEWS: ಇಂದಿನಿಂದ 18ನೇ ಲೋಕಸಭೆ ಮೊದಲ ಅಧಿವೇಶನ ಆರಂಭ: ನೂತನ ಸಂಸದರ ಪ್ರಮಾಣ

BIG NEWS: ಇಂದಿನಿಂದ 18ನೇ ಲೋಕಸಭೆ ಮೊದಲ ಅಧಿವೇಶನ ಆರಂಭ: ನೂತನ ಸಂಸದರ ಪ್ರಮಾಣ

ನವದೆಹಲಿ: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಹೊಸ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ.

ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಮಾಡಲಾಗುವುದು. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ, ರಾಜ್ಯಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೊದಲ ಅಧಿವೇಶನದಲ್ಲಿ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ನಾಯಕ ಮತ್ತು ಸತತ 7 ಅವಧಿಯ ಸಂಸದ ಭರ್ತೃಹರಿ ಮೆಹಾತಾಬ್ ಅವರನ್ನು ನೇಮಕ ಮಾಡಲಾಗಿದೆ. ಜುಲೈ 2 ಅಥವಾ 3ರಂದು ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ. ಜುಲೈ 22 ರಿಂದ ಬಜೆಟ್ ಅದಿವೇಶನ ಆರಂಭವಾಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular