HomeIndiaBREAKING NEWS: ನ. 25 ರಿಂದ ಸಂಸತ್ ಚಳಿಗಾಲದ ಅಧಿವೇಶನ: ವಕ್ಫ್, ಒನ್ ನೇಷನ್-ಒನ್ ಎಲೆಕ್ಷನ್...

BREAKING NEWS: ನ. 25 ರಿಂದ ಸಂಸತ್ ಚಳಿಗಾಲದ ಅಧಿವೇಶನ: ವಕ್ಫ್, ಒನ್ ನೇಷನ್-ಒನ್ ಎಲೆಕ್ಷನ್ ಮಸೂದೆ ಮಂಡನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗುತ್ತದೆ. ಡಿಸೆಂಬರ್ 20 ರವರೆಗೆ ಮುಂದುವರಿಯುತ್ತದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಈ ಚಳಿಗಾಲದ ಅಧಿವೇಶನದಲ್ಲಿ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆ ಮತ್ತು ವಕ್ಫ್(ತಿದ್ದುಪಡಿ) ಮಸೂದೆ – 2024 ಬಗ್ಗೆ ಚರ್ಚೆಯಾಗಲಿದೆ.

ಗೃಹ ಸಚಿವ ಅಮಿತ್ ಶಾ ಅವರು ವಕ್ಫ್(ತಿದ್ದುಪಡಿ) ಮಸೂದೆ, 2024 ಕುರಿತು ಮಾತನಾಡುತ್ತಾ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು ಎಂದು ಈ ಮೊದಲೇ ಪ್ರಸ್ತಾಪಿಸಿದ್ದಾರೆ. ಗುರ್‌ಗಾಂವ್‌ನ ಬಾದ್‌ಶಾಹ್‌ಪುರ ಪ್ರದೇಶದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಶಾ, “ವಕ್ಫ್ ಬೋರ್ಡ್ ಕಾನೂನನ್ನು ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ನಾವು ಅದನ್ನು ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular