BREAKING : ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳ ವಿರುದ್ಧ ಹರಿಹಾಯುತ್ತಲೇ ಸುಗಮ ಕಲಾಪಕ್ಕೆ ಮನವಿ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಮನವಿ ಮಾಡಿದ್ದಾರೆ.

ಸಂಸತ್ ಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, 75ನೇ ವರ್ಷದ ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಅಧಿವೇಶನ ನಡೆಯುತ್ತಿದೆ. ಎಲ್ಲಾ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ಕೊಡುತ್ತೇವೆ. ಜನರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕವಾಗಿ ಚರ್ಚೆ ನಡೆಯಬೇಕಿದೆ. ಕಾಂಗ್ರೆಸ್ ಎಣ್ದಿಗೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದು ಕಡಿಮೆ. ಬರಿ ಅಧಿಕರದ ದಾಹ ಇರುವವರ ಪಕ್ಷಗಳನ್ನು ಜನ ತಿರಸ್ಕರಿಸಿದ್ದಾರೆ ಎಂದರು.

ದೇಶದ ಜನ ಎಲ್ಲವನ್ನೂ ಅರ್ಥ ಮಾಡಿಕೊಂಡಿದ್ದಾರೆ. ವಿಪಕ್ಷಗಳಿಂದ ಕಲಾಪದ ಸಮಯ ಹಾಳುಮಾಡುವ ಕೆಲಸ ಆಗುತ್ತಿದೆ. ಜನರ ನಿರೀಕ್ಷೆಯಂತೆ ವಿಪಕ್ಷಗಳು ನಡೆದುಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಇಂದಿನಿಂದ ಡಿಸೆಂಬರ್ 20ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read