HomeIndiaಬಿಜೆಪಿ ಸೇರ್ಪಡೆಗೂ ಮುನ್ನ ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿದ ಸಂಸದೆ ಸುಮಲತಾ

ಬಿಜೆಪಿ ಸೇರ್ಪಡೆಗೂ ಮುನ್ನ ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿದ ಸಂಸದೆ ಸುಮಲತಾ

ಮಂಡ್ಯ : ಸಂಸದೆ ಸುಮಲತಾ ಅಂಬರೀಷ್ ಇಂದು 11:30 ಕ್ಕೆ ಬಿಜೆಪಿ ಸೇರ್ಪಡೆಯಾಗಲಿದ್ದು, ಇದಕ್ಕೂ ಮುನ್ನ ಅಂಬರೀಷ್ ಸಮಾಧಿಗೆ ಸುಮಲತಾ ಪೂಜೆ ಸಲ್ಲಿಸಿದರು.

ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್ ಸಮಾಧಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಷ್ ಮತ್ತಿತರಿದ್ದರು.

ಮಂಡ್ಯದಲ್ಲಿ ಬುಧವಾರವಷ್ಟೇ ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು. ಶುಕ್ರವಾರ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ 11:30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಸಿ.ಟಿ. ರವಿ ಮೊದಲಾದವರ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಜೆಡಿಎಸ್ ನೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರಿಂದ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದ್ದು, ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಸುಮಲತಾ ಮಂಡ್ಯದಲ್ಲಿ ಈ ಬಾರಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular