HomeLatest Newsಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ..!: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟನೆ

ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ..!: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟನೆ

ಬೆಂಗಳೂರು: ಗೊಂದಲದ ನಡುವೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಗಣತಿ ಕಾರ್ಯ ರಾಜ್ಯದಲ್ಲಿ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಈ ನಡುವೆ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ ಎಂದು ಸರ್ಕಾರ ತಿಳಿಸಿದೆ. ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆಯಲ್ಲಿ ಜನರ ಭಾಗಿ ಸ್ವಯಂಪ್ರೇರಿತ. ಮಾಹಿತಿ ನೀಡಲು ನಿರಾಕರಿಸಬಹುದು ಎಂದು ಸರ್ಕಾರ, ಹಿಂದುಳಿದ ವರ್ಗಗಳ ಆಯೋಗ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ. ಸಮೀಕ್ಷೆಗೆ ತಡೆ ಕೋರಿದ ಅರ್ಜಿ ವಿಚಾರಣೆಯ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular