ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಅಧಿಕಾರಿಗಳು ಅಮಾನತು

ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡದಲ್ಲಿ ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಕಿರಿಯ ಇಂಜಿನಿಯರ್ ವರದರಾಜ್, ಮೆಕಾನಿಕ್ ಗ್ರೇಡ್-1ದು ನರಸಿಂಹಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ತುಮಕೂರಿನ ಪ್ರಸರಣ ವೃತ್ತದ ಅಧಿಕ ಇಂಜಿನಿಯರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಇದೇ ಪ್ರಕರಣ ಸಂಬಂಧ ಕೆಪಿಟಿಸಿಎಲ್ ನೌಕರರ ಕಿರಿಯ ಇಂಜಿನಿಯರ್ ಶ್ರೀನಿವಾಸ್ ಮತ್ತು ಸಂತೋಷ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೇ 23ರಂದು ಪಾವಗಡ ಹೊರವಲಯದ ತೋಟದಲ್ಲಿ ಕಚೇರಿ ಸಮಯದಲ್ಲೇ ಪಾರ್ಟಿ ಮಾಡಿ ಹೊಡೆದಾಡಿಕೊಂಡಿದ್ದರು. ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಟಿಸಿಎಲ್ ಶಿಸ್ತು ಕ್ರಮ ಕೈಗೊಂಡಿದ್ದು, ಇಬ್ಬರನ್ನು ಅಮಾನತು ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read