HomeIndiaಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ: ಅರೆಸ್ಟ್

ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ: ಅರೆಸ್ಟ್

ಅಮೃತಸರ್: ಪ್ರಯಾಣಿಕನ್ನೊಬ್ಬ ಕುಡಿದ ಮತ್ತಿನಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆತನನ್ನು ಬಂಧಿಸಲಾಗಿದೆ.

ದುಬೈ ನಿಂದ ಅಮೃತಸರಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದೆ. ರಾಜೇಂದರ್ ಸಿಂಗ್ ಎಂಬ ಪ್ರಯಾಣಿಕ ಕುಡಿದ ಮತ್ತಿನಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಮೃತಸರದಲ್ಲಿ ವಿಮಾನ ಲ್ಯಾಂಡ್ ಆದ ನಂತರ ಆರೋಪಿಯನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನ ಹತ್ತಿದ ನಂತರ ಮದ್ಯಪಾನ ಮಾಡಲು ಶುರು ಮಾಡಿದ್ದ ರಾಜೇಂದರ್ ಸಿಂಗ್ ಜಗಳವಾಡಿದ ನಂತರ ವಿಮಾನದ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.

ಜಲಂಧರ್‌ನ ಕೋಟ್ಲಿ ಗ್ರಾಮದ ರಾಜಿಂದರ್ ಸಿಂಗ್ ಗಗನಸಖಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದು ಕಿರುಕುಳ ನೀಡಿದ್ದಾನೆ. ಏರ್‌ಲೈನ್‌ನ ಸಹಾಯಕ ಭದ್ರತಾ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದು, ಶ್ರೀ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular