BREAKING: ಚಲಿಸುತ್ತಿದ್ದ ರೈಲಿನಲ್ಲಿ ಅನುಮಾನಾಸ್ಪದವಾಗಿ ಪ್ರಜ್ಞೆ ತಪ್ಪಿದ ಪ್ರಯಾಣಿಕರು

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರು ಅನುಮಾನವಾಗಿ ಪ್ರಜ್ಞೆ ತಪ್ಪಿದ್ದಾರೆ. ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲ್ ನಲ್ಲಿ ಘಟನೆ ನಡೆದಿದೆ.

ರೈಲು ಬೆಳಗಾವಿ ನಿಲ್ದಾಣಕ್ಕೆ ಬರುತ್ತಿದ್ದಂತೆ ರೈಲಿನ ಸಿಬ್ಬಂದಿ ಪೊಲೀಸರ ಗಮನಕ್ಕೆ ತಂದಿದ್ದಾರೆ. 8 ಪ್ರಯಾಣಿಕರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ.

ಸಹಪ್ರಯಾಣಿಕರು ನೀಡಿದ ಆಹಾರ ಸೇವಿಸಿ 8 ಜನ ಪ್ರಜ್ಞೆ ತಪ್ಪಿರುವ ಸಾಧ್ಯತೆ ಇದೆ. ಬೆಳಗಾವಿ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read