HomeLatest Newsಪ್ರಯಾಣಿಕರೇ ಗಮನಿಸಿ…! ಕಾಮಗಾರಿ ಹಿನ್ನೆಲೆ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರೇ ಗಮನಿಸಿ…! ಕಾಮಗಾರಿ ಹಿನ್ನೆಲೆ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಕಾಮಗಾರಿ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.

ಜುಲೈ 6ರಂದು ಬೆಳಗ್ಗೆ 7ರಿಂದ 8 ಗಂಟೆಯವರೆಗೆ ಸಂಚಾರ ಸ್ಥಗಿತಗೊಳಿಸಲಾಗುವುದು. ಇಂದಿರಾನಗರ -ಬೈಯಪ್ಪನಹಳ್ಳಿಯ ನಡುವೆ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಲಿದೆ.

ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದಿರಾನಗರ- ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ಇತರ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳು ಕಾರ್ಯನಿರ್ವಹಿಸಲಿವೆ. ಪ್ರಯಾಣಿಕರು ತಾತ್ಕಾಲಿಕ ಬದಲಾವಣೆ ಗಮನಿಸುವಂತೆ ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಮೆಟ್ರೋ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ನಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular