ಪ್ರಯಾಣಿಕರೇ ಗಮನಿಸಿ :  ನಾಳೆ ದಾವಣಗೆರೆ ಜಿಲ್ಲೆಯಲ್ಲಿ ಸಾರಿಗೆ ಬಸ್’ಗಳ ಸಂಚಾರದಲ್ಲಿ ವ್ಯತ್ಯಯ

ದಾವಣಗೆರೆ : ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ.

ಈ ದಿನದಂದು ಸಂಸ್ಥೆಯ ಬಸ್ಸುಗಳ ಸೇವೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲದ ಕಾರಣ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read