ಬೆಂಗಳೂರು: ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋಗೆ ಸಾರಿಗೆ ನಿಗಮಗಳ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬೆಂಗಳೂರು ಚಲೋಗೆ ಕರೆ ನೀಡಿದೆ. ನಾಳೆ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ.
ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಕೆಲಸ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಸಾರಿಗೆ ನೌಕರರು ಭಾಗವಹಿಸಲಿದ್ದಾರೆ. ವೇತನ ಹೆಚ್ಚಳದ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ನಾಳೆ ಪ್ರತಿಭಟನೆಯಲ್ಲಿ ಸಾವಿರಾರು ಸಾರಿಗೆ ನೌಕರರು ಭಾಗವಹಿಸಲಿದ್ದಾರೆ. ಹೀಗಾಗಿ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

