ಪಾಟ್ನಾ: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ಗ್ಯಾಂಗ್, ಉದ್ಯಮಿ ಹಾಗೂ ಅವರ ಕುಟುಂಬ ಸದಸ್ಯರನ್ನು ಒತ್ತೆಯಾಳುಗಳನ್ನಾಗಿಟ್ಟುಕೊಂಡು, ಬಂದೂರು ತೋರಿಸಿ ಬೆದರಿಕೆ ಹಾಕಿ ಮನೆಯಲ್ಲಿದ್ದ 1.26ಕೋಟಿ ಹಣ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ.
ಬಿಹಾರದ ಪಾಟ್ನಾದ ನಳಂದಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಮೋಟಾರ್ ಪಾರ್ಟ್ಸ್ ಉದ್ಯಮಿ ಸಂತೋಷ್ ಪ್ರಕಾಶ್ ಅವರ ಮನೆಗೆ ನುಗ್ಗಿದ ಕಳ್ಳರ ಗ್ಯಾಂಗ್ ಮನೆಯವರನ್ನೆಲ್ಲ ಬೆದರಿಸಿ ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣ ದೋಚಿ ಪರಾರುಯಾಗಿದೆ.
ಅಗಮ್ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಐವರು ಅಪರಿಚಿತರ ಗುಂಪು ಮನೆಗೆ ನುಗ್ಗಿ ದರೋಡೆ ಮಾಡಿದೆ. 1.26ಕೋಟಿ ರೂ ನಗದು ಹಣ ಹಾಗೂ 1.26ಕೋಟಿ ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ದರೋಡೆ ಬಗ್ಗೆ ಉದ್ಯಮಿ ಸಂತೋಷ್ ಪ್ರಕಾಶ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.