ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-1 ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಯಾಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-1 ಆರೋಪಿ ಪವಿತ್ರಾ ಗೌಡಗೆ ಹೈಕೋರ್ಟ್ ಜಾಮೀನು ನೀಡಿತ್ತು. ನಂತರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ದರ್ಶನ್ ಸೇರಿ 7 ಮಂದಿ ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿತ್ತು.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ಶಾಕ್ ನೀಡಿತ್ತು. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿತ್ತು.
ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ದೋಷಗಳಿವೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಆರೋಪಿ ಎಷ್ಟೇ ದೊಡ್ದವನಾಗಿದ್ದರೂ ಕಾನೂನಿನ ಮುಂದೆ ತಲೆಬಾಗಲೇಬೇಕು. ಸಾಕ್ಷಿಗಳ ವಿಚಾರಣೆಯನ್ನು ನಡೆಸದೇ ತೀರ್ಪು ಪ್ರಕಟಿಸಿರುವುದು ಸರಿಯಲ್ಲ. ಕೊಲೆ ಆರೋಪಿಗಳಿಗೆ ರಾಜಾತಿಥ್ಯ ನೀಡಿರುವ ಬಗ್ಗೆ ದೂರು ದಾಖಲಾಗಿದ್ದರೂ ಈ ಬಗ್ಗೆ ಸಮರ್ಪಕವಾಗಿ ವಿಚಾರಣೆ ನಡೆಸದೇ ಜಾಮೀನು ನೀಡಿರುವ ಹೈಕೋರ್ಟ್ ಕ್ರಮ ಸರಿಯಲ್ಲ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಶೀಘ್ರವಾಗಿ ಸಾಕ್ಷ್ಯಗಳ ವಿಚಾರಣೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ತಿಳಿಸಿತ್ತು.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
