HomeKarnatakaರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಬಿಗ್ ಶಾಕ್; ಜಾಮೀನು ಅರ್ಜಿ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಕೋರ್ಟ್ ನಲ್ಲಿ ಮತ್ತೆ ಹಿನ್ನಡೆಯಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ 59ನೇ ಸಿಸಿಹೆಚ್ ಕೋರ್ಟ್, ಜಾಮೀನು ಅರ್ಜಿ ವಜಾಗೊಳಿಸಿದೆ.

ನ್ಯಾಯಾಧೀಶರಾದ ಸುಜಾತಾ ಮಡುವಾಳಪ್ಪ ಸಾಂಭ್ರಾಣಿ ಅವರು ಆರೋಪಿ ಪವಿತ್ರಾಗೌಡಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ. ಇದರಿಂದ ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ನಿರಾಸೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಣದ ಮಳೆ ಸುರಿಸಿ, ಕೆಜಿಗಟ್ಟಲೇ ಚಿನ್ನಾಭರಣ ಧರಿಸಿ ವಿಡಿಯೋ ಹರಿಬಿಟ್ಟ ದಂಪತಿ: ಯೂಟ್ಯೂಬರ್ ಮನೆಗೆ ನುಗ್ಗಿ ದರೋಡೆ ಮಾಡಿ ಎಸ್ಕೇಪ್ ಆದ ಕಳ್ಳರು

ಚೆನ್ನೈ: ಕೆಲ ದಿನಗಳ ಹಿಂದೆ ಉತ್ತರ ಭಾರತ ಮೂಲದ ಯೂಟ್ಯೂಬರ್ ಮಹಿಳೆಯೊಬ್ಬರು ತಮ್ಮ ಬಳಿ ಇದ್ದ ಚಿನ್ನಾಭರಣಗಳ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಬಳಿಕ ಮನೆಯಲ್ಲಿದ್ದ ಹಣ, ಚಿನ್ನಾಭರಣಗಳ ಕಳ್ಳತನ ನಡೆದು ಅಪಾರ ಪ್ರಮಣದ ಚಿನ್ನಾಭರಣ, ನಗದು ಹಣ ಕಳೆದುಕೊಂಡು ಕಣ್ಣೀರಿಟ್ಟ ಘಟನೆ ಬೆಳಕಿಗೆ ಬಂದಿತ್ತು. ಇದೀಗ ಇಂತದ್ದೇ ಘಟನೆ ತಮಿಳುನಾಡಿನಲ್ಲಿ ಖ್ಯಾತ ಯೂಟ್ಯೂಬರ್ ದಂಪತಿ ಮನೆಯಲ್ಲಿಯೂ ನಡೆದಿದೆ.

ಯೂಟ್ಯೂಬ್ ವಿಡಿಯೋಗಾಗಿ ಖ್ಯಾಅತ ಯೂಟ್ಯೂಬರ್ ವಿನೋತ್ ಹಾಗೂ ಪತ್ನಿ ಮಧುಮಿತಾ ಮನೆಯಲ್ಲಿದ್ದ ರಾಶಿ ರಾಶಿ ಹಣ, ಚಿನ್ನಾಭರಣಗಳನ್ನು ಪ್ರದರ್ಶಿಸಿ ವಿಡಿಯೋ ಮಾಡಿ ಅಪ್ ಲೋಡ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಸಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಇದಾದ ಕೆಲವೇ ದಿನಗಳಲ್ಲಿ ಯೂಟ್ಯೂಬರ್ ವಿನೋತ್ ಅವರ ಮನೆಗೆ ನುಗ್ಗಿದ ದರೋಡೆಕೋರರು ಹಣ, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

ತಮಿಳುನಾಡಿನ ನಾಗರ್‌ಕೋಯಿಲ್‌ ಬಳಿಯ ತುಕೋನಂನ ವಿಐಪಿ ಗಾರ್ಡನ್‌ನಲ್ಲಿ ವಾಸವಾಗಿರುವ ಯೂಟ್ಯೂಬರ್ ವಿನೋತ್ ಕುಮಾರ್ ಅವರ ಮನೆಯಲ್ಲಿ ಭಾರಿ ಕಳ್ಳತನ ನಡೆದಿದೆ. ಮನೆಯಲ್ಲಿದ್ದ 944 ಗ್ರಾಂ ಚಿನ್ನ ಮತ್ತು ನಗದನ್ನು ಕಳ್ಳರು ದೋಚಿದ್ದಾರೆ. ಇತ್ತೀಚೆಗೆ, ದಂಪತಿ ತಮ್ಮ ಮನೆಯಲ್ಲಿದ್ದ ಹಣ ಹಾಗೂ ಚಿನ್ನಾಭರಣಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ದಂಪತಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವಿಡಿಯೋದಲ್ಲಿ ಯೂಟ್ಯೂಬರ್ ವಿನೋತ್ ಪತ್ನಿ ಮಧುಮಿತಾ ತನ್ನ ಮಗಳ ಮೇಲೆ ಹಣವನ್ನು ಸುರಿಯುತ್ತಿರುವ ಹಾಅಗೂ ತಾನು ಕೆಜಿ ಗಟ್ಟಲೆ ಚಿಭಾರಣಗಳನ್ನು ಧರಿಸಿ ಫೋಸು ನೀಡಿದ್ದ ವಿಡಿಯೋಗಳು ಇವೆ. ಈ ವಿಡಿಯೋ ಭಾರಿ ವೈರಲ್ ಆಗಿತ್ತು. ಯೂಟ್ಯೂಬರ್ ಮನೆಯಲ್ಲಿದ್ದ ಹಣದ ರಾಶಿ ಹಾಗೂ ಚಿನ್ನಾಭರಣಗಳನ್ನು ಕಂಡು ನೆಟ್ಟಿಗರು ದಂಗಾಗಿದ್ದರು.

ಈಗ ಮನೆಯಲ್ಲಿ ಯೂಟ್ಯೂಬರ್ ವಿನೋತ್ ಕುಮಾರ್‌, ಪತ್ನಿ ಮಧುಮಿತಾ ವಾಸವಾಗಿದ್ದ ವೇಳೆಯೇ ರಾತ್ರಿ ಅಪರಿಚಿತರು ಮನೆಯ ಹಿಂದಿನ ಬಾಗಿಲನ್ನು ಮುರಿದು ಒಳಗೆ ನುಗ್ಗಿದ್ದು, ಹಣ ಚಿನ್ನಾಭರಣಗಳನ್ನು ದೋಚಿ ಎಸ್ಕೇಪ್ ಆಗಿದ್ದಾರೆ.

ಸಾಮಾಜಿಕ ಜಾಲತಣಗಳಲ್ಲಿ ಹಣ ಹಾಗೂ ಚಿನ್ನಾಭರಣಗಳ ವಿಡಿಯೋ ಹರಿಬಿಟ್ಟ ಬಳಿಕ ಈ ಘಟನೆ ನಡೆದಿದೆ. ಕನ್ಯಾಅಕುಮಾರಿ ಮೂಲದ ವಿನೋತ್ ಕುಮಾರ್ ಹಾಗೂ ಮಧುಮಿತಾ ದಂಪತಿ ಜನಪ್ರಿಯ ಯೂಟ್ಯೂಬರ್ ಗಳಾಗಿದ್ದಾರೆ. ಘಟನೆ ಸಂಅಬ್ಂಧ ರಾಜಕ್ಕಮಂಗಲಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳು ಮತ್ತು ದಂಪತಿಯ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular