ಬೆಂಗಳೂರು : ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಪವಿತ್ರಾಗೌಡ ‘ಇನ್’ಸ್ಟಾಗ್ರಾಂ’ ಪೋಸ್ಟ್ ಡಿಲೀಟ್ ಆಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ & ಗ್ಯಾಂಗ್ ಜಾಮೀನು ರದ್ದಾಗಿದ್ದು, ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ.
ಸುಪ್ರೀಂಕೋರ್ಟಿನ ತೀರ್ಪಿಗೂ ಮುಂಚೆ ಪವಿತ್ರಾ ಗೌಡ ಪೋಸ್ಟ್ ಹಂಚಿಕೊಂಡಿದ್ದರು,. ‘’ಸತ್ಯ ಎಲ್ಲಕ್ಕಿಂತ ಶಕ್ತಿಯುತವಾದುದ್ದು, ನ್ಯಾಯ ಸಿಕ್ಕೇ ಸಿಗುತ್ತದೆ’’ ಎಂದು ಅವರು ಬರೆದುಕೊಂಡಿದ್ದರು. ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆ ಪೋಸ್ಟ್ ಡಿಲೀಟ್ ಆಗಿದೆ.
