ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ, ನಟ ದರ್ಶನ್ ಸೇರಿದಂತೆ ೭ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಪವಿತ್ರಾ ಗೌಡ ಅವರ ಆರ್.ಆರ್.ನಗರದಲ್ಲಿರುವ ನಿವಾಸಕ್ಕೆ ಆಗಮಿಸಿದ್ದು, ಶರಣಾಗುವಂತೆ ಸೂಚಿಸಿದ್ದಾರೆ.
ಜಾಮೀನು ರದ್ದಾಗಿರುವ ವಿಷಯ ತಿಳಿಯುತ್ತಿದ್ದಂತೆ ಪವಿತ್ರಾ ಗೌಡ ಕಣ್ಣೀರಿಟ್ಟಿದ್ದಾರೆ. ತಮ್ಮ ರೆಡ್ ಕಾರ್ಪೆಟ್ ಸೆಂಟರ್ ಗೆ ಹೋಗಲು ರೆಡಿಯಾಗುತ್ತಿದ್ದ ಅವರನ್ನು ಪೊಲೀಸರು ಹೊರ ಹೋಗದಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ತಮ್ಮ ಜವಾಬ್ದಾರಿಗಳನ್ನು ಬೇರೆಯವರಿಗೆ ಹಸ್ತಾಂತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.