HomeKarnatakaBREAKING NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಜೈಲುಪಾಲಾದ ಪವಿತ್ರಾ ಗೌಡಗೆ ಕೈದಿ ನಂಬರ್ ವಿತರಿಸಿದ ಜೈಲಾಧಿಕಾರಿಗಳು

BREAKING NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಜೈಲುಪಾಲಾದ ಪವಿತ್ರಾ ಗೌಡಗೆ ಕೈದಿ ನಂಬರ್ ವಿತರಿಸಿದ ಜೈಲಾಧಿಕಾರಿಗಳು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ನಂಬರ್ ವಿತರಣೆ ಮಾಡಲಾಗಿದೆ.

ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಬೆಂಗಳೂರಿನ ಆರ್.ಆರ್.ನಗರ ಬಳಿಯ ಪಟ್ಟಣಗೆರೆ ಶೆಡ್ ನಲ್ಲಿ ಕೂಡಿ ಹಾಕಿ ಚಿತ್ರ ಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಹತ್ಯೆ ಬಳಿಕ ರೇಣುಕಾಸ್ವಾಮಿ ಶವವನ್ನು ಕಾಮಾಕ್ಷಿಪಾಳ್ಯ ಬಳಿಯ ಚರಂಡಿಗೆ ಎಸೆದಿದ್ದರು. ಈ ಪ್ರಕರಣ ಸಂಬಂಧ ನಟ ದರ್ಶನ್, ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಮುಖ ಆರೋಪಿ ಪವಿತ್ರಾ ಗೌಡಳನ್ನು ನ್ಯಾಯಾಂಗ ಬಂಧನಕ್ಕೆ ನೀದಲಾಗಿದ್ದು, ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಪವಿತ್ರಾ ಗೌಡಗೆ ಕೈದಿ ನಂಬರ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್ 6024/2024 ನ್ನು ವಿತರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular