HomeLatest NewsBREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್...

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಕಾನೂನು ಎಲ್ಲರಿಗೂ ಒಂದೇ. ಜೈಲಿನಲ್ಲಿರುವ ಆರೋಪಿಗಳಿಗೆ ಸವಲತ್ತು ನೀಡುವಂತಿಲ್ಲ ಎಂದು ಆದೇಶ ನೀಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಈ ಹಿಂದೆ ತನಗೆ ಪ್ರತಿ ದಿನ ಜೈಲಿನಲ್ಲಿ ಮನೆ ಊಟಕ್ಕೆ ಅವಕಾಶ ಕೊಡಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಜೈಲಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಆರೋಪಿಗಳಾದ ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಅವರಿಗೆ ವಾರದಲ್ಲಿ ಒಂದು ದಿನ ಮನೆ ಊಟ ನೀಡಲು ಅವಕಾಶ ನೀಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋರ್ಟ್ ಆದೇಶ ನೀಡಿದರೂ ಜೈಲಾಧಿಕಾರಿಗಳು ವಾರಕ್ಕೊಮ್ಮೆ ಮನೆ ಊಟಕ್ಕೆ ಅವಕಾಶ ಕೊಡುತ್ತಿಲ್ಲ. ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆ ಎಂದು ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ವಾರಕ್ಕೊಮ್ಮೆ ಮನೆ ಊಟಕ್ಕೂ ಬ್ರೇಕ್ ಹಾಕಿದೆ.

ಕೊಲೆ ಆರೋಪಿಗಳಾದ ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಅವರಿಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 57ನೇ ಸಿಸಿಹೆಚ್ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೇ ಜೈಲಿನಲ್ಲಿ ಆರೋಪಿಗಳಿಗೆ ಸವಲತ್ತು ನೀಡುವಂತಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶವಿದೆ. ಒಬ್ಬೊಬ್ಬರಿಗೆ ಒನ್ನೊಂದು ರೀತಿಯ ಸವಲತ್ತು ಕಾನೂನು ಬಾಹಿರ. ಕಾನೂನು ಎಲ್ಲರಿಗೂ ಒಂದೇ. ವಿಶೇಷ ಸಂದರ್ಭಗಳಲ್ಲಿ ಮಾತ್ರ ಮನೆ ಊಟಕ್ಕೆ ಅವಕಾಶವಿರುತ್ತದೆ. ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆಯಾದರೆ ಅಧಿಕಾರಿಗಳ ವಿರುದ್ಧ ಕ್ರಮವಾಗುತ್ತದೆ ಎಂದು ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ ತಿಳಿಸಿದೆ.

ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್ ಅವರಿಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ ನೀಡಲಾಗಿದ್ದು, ಮೂವರಿಗೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular