HomeKarnatakaಕೆ. ಸುಧಾಕರ್ ಪರ ಪ್ರಚಾರಕ್ಕೆ ಪ್ರಧಾನಿ ಮೋದಿ, ನಟ ಪವನ್ ಕಲ್ಯಾಣ್

ಕೆ. ಸುಧಾಕರ್ ಪರ ಪ್ರಚಾರಕ್ಕೆ ಪ್ರಧಾನಿ ಮೋದಿ, ನಟ ಪವನ್ ಕಲ್ಯಾಣ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಟ ಪವನ್ ಕಲ್ಯಾಣ್ ಆಗಮಿಸಲಿದ್ದಾರೆ.

ತೆಲುಗು ಚಿತ್ರರಂಗದ ಖ್ಯಾತ ನಟರಾದ ಪವನ್ ಕಲ್ಯಾಣ್ ಚಿಕ್ಕಬಳ್ಳಾಪುರದಲ್ಲಿ ತಮ್ಮ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪವನ್ ಕಲ್ಯಾಣ್ ಅವರ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಅವರ ಶೆಡ್ಯೂಲ್ ನೋಡಿಕೊಂಡು ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಏಪ್ರಿಲ್ 18ರಂದು ಸಂಜೆ 5 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ಪವನ್ ಕಲ್ಯಾಣ್ ಸುಧಾಕರ್ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ಸಮೀಪದ ಅಲಗುರ್ಕಿ ಬಳಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಲಕ್ಷಾಂತರ ಜನ ಭಾಗವಹಿಸಲಿದ್ದಾರೆ ಕಾರ್ಯಕ್ರಮದ ಸಿದ್ಧತೆ ಈಗಾಗಲೇ ಆರಂಭವಾಗಿದೆ. ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular