HomeEntertainmentಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಬಗ್ಗೆ ಅಪಹಾಸ್ಯ: ಸ್ಟಾಂಡ್ ಅಫ್ ಕಾಮಿಡಿಯನ್ ಅನುದೀಪ್ ಪೊಲೀಸ್...

ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಬಗ್ಗೆ ಅಪಹಾಸ್ಯ: ಸ್ಟಾಂಡ್ ಅಫ್ ಕಾಮಿಡಿಯನ್ ಅನುದೀಪ್ ಪೊಲೀಸ್ ವಶಕ್ಕೆ

ಹೈದರಾಬಾದ್: ಆಂಧ್ರಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ಅವರ ಬಗ್ಗೆ ಹಾಸ್ಯ ಮಾಡಿದ್ದ ಆಂಡ್ ಅಪ್ ಕಾಮಿಡಿಯನ್ ಅನುದೀಪ್ ಕಾಟಿಕಾಲ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪವನ್ ಕಲ್ಯಾಣ್ ಅವರ ವೈಯಕ್ತಿಕ ಜೀವನದ ಬಗ್ಗೆ ಹಾಸ್ಯ ಮಾಡಿದ ಆರೋಪದ ಮೇಲೆ ಹೈದರಾಬಾದ್ ಮೂಲದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಅನುದೀಪ್ ಕಾಟಿಕಾಲ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಂಧ್ರ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಅನುದೀಪ್ ಅವರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನುದೀಪ್ ಅವರು ಇತ್ತೀಚೆಗೆ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದ ಸ್ಟ್ಯಾಂಡ್-ಅಪ್ ಕಾಮಿಡಿ ವಿಡಿಯೋವೊಂದರಲ್ಲಿ ಪವನ್ ಕಲ್ಯಾಣ್ ಅವರ ವಿಚ್ಛೇದನಗಳು ಮತ್ತು ನಿಹಾರಿಕಾ ಕೊನಿಡೇಲ ವಿಚ್ಛೇದನ, ಮೆಗಾ ಸ್ಟಾರ್ ಕುಟುಂಬದ ಸದಸ್ಯರ ಬಗ್ಗೆ ಹಾಸ್ಯ ಮಾಡಿದ್ದರು. ಇದು ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಮತ್ತು ಜನಸೇನಾ ಪಕ್ಷದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಪವನ್ ಕಲ್ಯಾಣ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅನುದೀಪ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅವರ ಕಾರ್ಯಕ್ರಮದ ವೇದಿಕೆಗೆ ನುಗ್ಗಿ ಗಲಾಟೆ ಕೂಡ ಮಾಡಿದ್ದರು ಎನ್ನಲಾಗಿದೆ.

ಜನಸೇನಾ ಪಕ್ಷದ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಆಂಧ್ರಪ್ರದೇಶದ ಕಾಕಿನಾಡ ಪೊಲೀಸರು ಅನುದೀಪ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಏಪ್ರಿಲ್ 14ರಂದು ಪ್ರಯಾಗ್‌ರಾಜ್‌ನಲ್ಲಿ ತಮ್ಮ ಕುಟುಂಬದವರನ್ನು ಭೇಟಿ ಮಾಡಲು ಹೋಗಿದ್ದ ಅನುದೀಪ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅನುದೀಪ್ ಕಾಟಿಕಾಲ ತಮ್ಮ ಕಾಮಿಡಿ ಕಾರ್ಯಕ್ರಮದಲ್ಲಿ ಹೆಂಡತಿಗೆ ಹೇಗೆ ವಿಚ್ಛೇದನ ನೀಡಬೇಕು ಎಂಬುದನ್ನು ಪವನ್ ಕಲ್ಯಾಣ್ ಅವರಿಂದ ಕಲಿಯಬೇಕು ಎಂದು ವ್ಯಂಗ್ಯವಾಡಿದ್ದರು. ಅಲ್ಲದೆ ಇತ್ತೀಚೆಗೆ ವಿಚ್ಛೇದನ ಪಡೆದ ಪವನ್ ಕಲ್ಯಾಣ್ ಅವರ ಸೋದರಸಂಬಂಧಿ ನಿಹಾರಿಕಾ ಕೊನಿಡೆಲ ಅವರು ಈ ವಿಷಯದಲ್ಲಿ ತಮ್ಮ ಚಿಕ್ಕಪ್ಪನಿಂದ ಸಲಹೆ ಪಡೆಯಬಹುದು ಎಂದು ಕಾಲೆಳೆದಿದ್ದರು. ರಾಮ್ ಚರಣ್ ಅವರನ್ನು ವಿನಾಕಾರಣ ಕೆಟ್ಟ ಪದ ಬಳಸಿ ನಿಂದಿಸಿದ್ದರು. ಜೂ ಎನ್​​ಟಿಆರ್, ನಂದಮೂರಿ ಬಾಲಕೃಷ್ಣ ಅವರುಗಳ ಬಗ್ಗೆಯೂ ವ್ಯಂಗ್ಯವಾಡಿದ್ದರು.

ಅನುದೀಪ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಮಾನನಷ್ಟ ಮೊಕದ್ದಮೆ, ಸಾರ್ವಜನಿಕ ಶಾಂತಿ ಭಂಗ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ಅನುದೀಪ್ ಅವರನ್ನು ವಶಕ್ಕೆ ಪಡೆದು, ರೈಲಿನ ಮೂಲಕ ಕಾಕಿನಾಡಕ್ಕೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಕಾಮಿಡಿ ವಿವಾದಕ್ಕೀಡಾಗುತ್ತಿದ್ದಂತೆ ಸಾಮಾಜಿಕ ಜಾಕತಾಣಗಳಲ್ಲಿ ಹೇಳಿಕೆ ನೀಡಿದ್ದ ಅನುದೀಪ್ ಕಾಟಿಕಾಲ ನನ್ನ ಉದ್ದೇಶ ವಿಚ್ಛೇದನದ ಬಗ್ಗೆ ಇರುವ ಸಾಮಾಜಿಕ ಹಿಂಜರಿಕೆಯನ್ನು ಹೋಗಲಾಡಿಸುವುದಾಗಿತ್ತು ಹಾಗೂ ಅಭಿಮಾನಿಗಳ ಅತಿರೇಕದ ವರ್ತನೆಗಳ್ನು ಪ್ರಶ್ನಿಸುವುದಾಗಿತ್ತು. ನನಗೆ ಯಾರನ್ನೂ ನೋಯಿಸುವ ಉದ್ದೇಶ ಇರಲಿಲ್ಲ ಎಂದಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular