ದಾವಣಗೆರೆ : ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಶಿವಪ್ಪ (51) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಅವರು ಡೆತ್ ನೋಟ್ ಬರೆದಿಟ್ಟು, ಗ್ರಾಮ ಪಂಚಾಯಿತಿ ಪಿಡಿಒ ನಂದಲಿಂಗೇಶ್ ಅವರ ಮಾನಸಿಕ ಕಿರುಕುಳವೇ ಈ ಕೃತ್ಯಕ್ಕೆ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಡೆತ್ ನೋಟ್‌ನಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡಲಾಗುತ್ತಿತ್ತು. ಹೆಚ್ಚುವರಿ ಕಂದಾಯ ವಸೂಲಿ ಮಾಡುವಂತೆ ಎಂದು ಶಿವಪ್ಪ ಉಲ್ಲೇಖಿಸಿದ್ದಾರೆ.
ಬಿಲ್ ಕಲೆಕ್ಟರ್ ಶಿವಪ್ಪ ಅವರು ಪಿಡಿಒ ನಂದಲಿಂಗೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಡೆತ್ ನೋಟ್‌ನಲ್ಲಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡಲಾಗುತ್ತಿತ್ತು. ಹೆಚ್ಚುವರಿ ಕಂದಾಯ ವಸೂಲಿ ಮಾಡುವಂತೆ ಗುರಿ ನಿಗದಿ ಮಾಡಿ ಮಾನಸಿಕ ಒತ್ತಡ ಹೇರುತ್ತಿದ್ದರು ಎಂದು ಶಿವಪ್ಪ ಉಲ್ಲೇಖಿಸಿದ್ದಾರೆ.
ಮೃತ ಶಿವಪ್ಪ ಅವರ ಪುತ್ರ ಅಶೋಕ್ ಅವರು ಬಿಳಚೋಡು ಪೊಲೀಸ್ ಠಾಣೆಯಲ್ಲಿ ಪಿಡಿಒ ನಂದಲಿಂಗೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಸುಮಾರು 23 ವರ್ಷಗಳ ಕಾಲ ನೀರಗಂಟಿಯಾಗಿ ಸೇವೆ ಸಲ್ಲಿಸಿದ್ದ ಶಿವಪ್ಪ, ಕಳೆದ 2-3 ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಡೆತ್ ನೋಟ್ ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕುಟುಂಬಸ್ಥರು ಆರೋಪಿತ ಪಿಡಿಒ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

