HomeKarnatakaಪಿಡಿಒ ಮೇಲೆ ಹಲ್ಲೆ, ಜೀವ ಬೆದರಿಕೆ: ಗ್ರಾಪಂ ಸದಸ್ಯೆ ಸದಸ್ಯತ್ವ ರದ್ದು, 6 ವರ್ಷ ಚುನಾವಣೆಗೆ...

ಪಿಡಿಒ ಮೇಲೆ ಹಲ್ಲೆ, ಜೀವ ಬೆದರಿಕೆ: ಗ್ರಾಪಂ ಸದಸ್ಯೆ ಸದಸ್ಯತ್ವ ರದ್ದು, 6 ವರ್ಷ ಚುನಾವಣೆಗೆ ನಿಲ್ಲದಂತೆ ಅನರ್ಹ

ಕೊಪ್ಪಳ: ಪಿಡಿಒ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಗ್ರಾಮ ಪಂಚಾಯಿತಿ ಸದಸ್ಯೆಯ ಸದಸ್ಯತ್ವವನ್ನು ರದ್ದು ಮಾಡಲಾಗಿದೆ.

ಯಲಬುರ್ಗಾದ ಹಿರೇಮ್ಯಾಗೇರಿ ಗ್ರಾಮ ಪಂಚಾಯಿತಿ ಸದಸ್ಯೆ ಶಾಂತಮ್ಮ ಬಂಡಿವಡ್ಡರ ಅವರು ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪಂಚಾಯತ್ ರಾಜ್ ಕಾಯ್ದೆ ಅನ್ವಯ ಸದಸ್ಯತ್ವ ರದ್ದುಪಡಿಸಿ ಮುಂದಿನ ಆರು ವರ್ಷ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಆದೇಶಿಸಲಾಗಿದೆ.

2025ರ ಫೆಬ್ರವರಿ 22ರಂದು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಪಿಎಂಎವೈ ಯೋಜನೆಯ ಮನೆಗಳಿಗೆ ಸಂಬಂಧಿಸಿದಂತೆ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಚರ್ಚಿಸುವ ವೇಳೆ ಮಗ ಭೀಮೇಶನೊಂದಿಗೆ ಆಗಮಿಸಿದ ಸದಸ್ಯೆ ಶಾಂತಮ್ಮ ಪಿಡಿಒ ರತ್ನಮ್ಮ ಗುಂಡಣ್ಣನವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಬಗ್ಗೆ ಪಿಡಿಒ ರತ್ನಮ್ಮ ದೂರು ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲಾಖೆಯ ಅಧಿಕಾರಿಗಳು ಪರಿಶೀಲಿಸಿದಾಗ ಆರೋಪ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಭಿನಯದ ಪ್ರಕಾರ ಇಲಾಖೆಯ ಪೀಠಾಧಿಕಾರಿ ಯಲ್ಲಯ್ಯ ಅವರು ಶಾಂತಮ್ಮ ಅವರ ಸದಸ್ಯತ್ವ ರದ್ದುಗೊಳಿಸಿ ಮುಂದಿನ ಆರು ವರ್ಷ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಆದೇಶಿಸಿದ್ದಾರೆ.

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular