HomeLatest Newsಕರ್ತವ್ಯದ ವೇಳೆಯಲ್ಲೇ ಪಿಡಿಒ ಮೇಲೆ ಹಲ್ಲೆ

ಕರ್ತವ್ಯದ ವೇಳೆಯಲ್ಲೇ ಪಿಡಿಒ ಮೇಲೆ ಹಲ್ಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲ ಸಮೀಪದ ಮಾಡಮಗೇರಿ ಗ್ರಾಮ ಪಂಚಾಯಿತಿ ಪಿಡಿಒ ಜಯಗೌಡ ಸಿದ್ದಗೌಡ ಪಾಟೀಲ್ ಅವರ ಮೇಲೆ ಕರ್ತವ್ಯದ ವೇಳೆಯಲ್ಲಿ ಹಲ್ಲೆ ನಡೆಸಲಾಗಿದೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದ ಪರಮೇಶಿ ಲಕ್ಷ್ಮಣ ಚಿತ್ರಕೋಟಿ, ಹನುಮಂತ, ಸಿದ್ದಪ್ಪ, ಯಲ್ಲಪ್ಪ ಎಂಬುವರ ಮೇಲೆ ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಕಲು ದಾಖಲೆಗಳ ಆಧಾರದ ಮೇಲೆ ಆಸ್ತಿಯ ಇ- ಸ್ವತ್ತು ಕೊಡುವಂತೆ ಆರೋಪಿಗಳು ಒತ್ತಾಯಿಸಿದ್ದರು. ಆದರೆ, ಇದು ಕಾನೂನುಬಾಹಿರವಾಗಿದ್ದು ಕೊಡಲು ಬರುವುದಿಲ್ಲ ಎಂದು ಪಿಡಿಒ ಜಯಗೌಡ ಹೇಳಿದ್ದರು. ಇದೇ ಕಾರಣಕ್ಕೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular