ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯಿತಿ ಪಿಡಿಒ ನಂಜುಂಡಮ್ಮ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಿವೇಶನಕ್ಕೆ ದೃಢೀಕರಣ ಪತ್ರ ನೀಡಲು ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಗೆ ಪಿಡಿಒ ನಂಜುಂಡಮ್ಮ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತೆಯೇ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 5 ಸಾವಿರ ರೂ. ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

