ಬೀದರ್: ಇ- ಸ್ವತ್ತು ಮಾಡಿಕೊಡಲು 12 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದುಫತಾ ಮಹಗಾಂವ್ ಪಿಡಿಒ ಅನಿತಾ ರಾಥೋಡ್ ಲೋಕಾಯುಕ್ತ ಬಲೆಗೆ ಬಿದ್ದವರು. ಪತಿ ದಯಾನಂದ ರಾಥೋಡ್ ಮೂಲಕ ಪಿಡಿಒ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತಾಗಿ ಜೀರ್ಗಾ(ಬಿ) ಗ್ರಾಮದ ರಾಜಕುಮಾರ ಪಾಟೀಲ್ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅವರ ದೂರು ಆಧರಿಸಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತರಾಯಪ್ಪ ಮತ್ತು ಸಿಬ್ಬಂದಿ ಕಚೇರಿ ಮೇಲೆ ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಪಿಡಿಒ ಅನಿತಾ ರಾಥೋಡ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.
